ಇಂದು ಹೊರ ಬೀಳಲಿದೆ ವಿಧಾನ ಪರಿಷತ್ ಚುನಾವಣೆ ಫಲಿತಾಂಶ, ಅಭ್ಯರ್ಥಿಗಳಿಗೆ ಢವ ಢವ! ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಮೂರೂ ಪಕ್ಷಗಳ ನಾಯಕರು ಹೆಚ್ಚು ಸ್ಥಾನ ಗೆಲ್ಲಿಸಲು ಮಿಂಚಿನಂತೆ ಕಾದಾಡಿದ್ದಾರೆ. ಅಖಾಡದಲ್ಲಿ ಧೂಳೆಬ್ಬಿಸಿದ್ದಾರೆ. ಈ ಹೋರಾಟಕ್ಕೆ ಮತದಾರ ಮತದಾನದ ಮುದ್ರೆ ಒತ್ತಿದ್ದು, ಇಂದು ತೀರ್ಪು ಬಹಿರಂಗವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ.

TV9kannada Web Team

| Edited By: sandhya thejappa

Dec 14, 2021 | 9:40 AM

20 ಕ್ಷೇತ್ರಗಳಲ್ಲಿ 25 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 90 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗೆ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿ ಬದಲಾಗಿದೆ. ಮೂರೂ ಪಕ್ಷಗಳ ನಾಯಕರು ಹೆಚ್ಚು ಸ್ಥಾನ ಗೆಲ್ಲಿಸಲು ಮಿಂಚಿನಂತೆ ಕಾದಾಡಿದ್ದಾರೆ. ಅಖಾಡದಲ್ಲಿ ಧೂಳೆಬ್ಬಿಸಿದ್ದಾರೆ. ಈ ಹೋರಾಟಕ್ಕೆ ಮತದಾರ ಮತದಾನದ ಮುದ್ರೆ ಒತ್ತಿದ್ದು, ಇಂದು ತೀರ್ಪು ಬಹಿರಂಗವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ. ಈಗಾಗಲೆ 25 ಕ್ಷೇತ್ರಗಳ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ ನಡೆದಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮತಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ ಕೌಟಿಂಗ್ ಶುರುವಾಗಿದೆ. ಇದರ ಜೊತೆಗೆ ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.  ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಕೋಲಾರ, ಕೊಡಗು ಹಾಗೂ ಮೈಸೂರು ಕೇಂದ್ರಗಳಲ್ಲಿ ಮತ ಎಣಿಕೆ ಶುರುವಾಗಿದೆ.

Follow us on

Click on your DTH Provider to Add TV9 Kannada