ಪರಿಷತ್ ಚುನಾವಣೆ: ಜೆಡಿಎಸ್ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ; ಇಲ್ಲಿದೆ ಮಾಹಿತಿ
ಕರ್ನಾಟಕ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಜೆಡಿಎಸ್ ಪಕ್ಷಕ್ಕೆ ದೊಡ್ಡ ಆಘಾತ ನೀಡಿದೆ. ನಾಲ್ಕರಿಂದ ಐದು ಶಾಸಕರು ಕ್ರಾಸ್ ವೋಟಿಂಗ್ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಆಂತರಿಕ ಗುಂಪುಗಾರಿಕೆ, ನಾಯಕತ್ವದ ಕೊರತೆ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯ ಅಸಮಾಧಾನ ಇದಕ್ಕೆ ಕಾರಣ ಎನ್ನಲಾಗಿದ್ದು, ಕಾಂಗ್ರೆಸ್ ಪಕ್ಷ ಇದರ ಲಾಭ ಪಡೆದಿದೆ ಎಂದು ಹೇಳಲಾಗಿದೆ.
ಬೆಂಗಳೂರು, ಜೂನ್ 19: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಡ್ಡಮತದಾನದಿಂದ ತೀವ್ರ ಆಘಾತ ಎದುರಾಗಿದೆ. ನಾಲ್ಕರಿಂದ ಐದು ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಇದು ಪಕ್ಷದ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.ಈ ಅಡ್ಡಮತದಾನಕ್ಕೆ ಹಲವು ಆಂತರಿಕ ಕಾರಣಗಳನ್ನು ವಿಶ್ಲೇಷಿಸಲಾಗುತ್ತಿದೆ. ಪಕ್ಷದೊಳಗಿನ ಗುಂಪುಗಾರಿಕೆ, ನಾಯಕತ್ವದ ಕೊರತೆ, ಹಿರಿಯ ನಾಯಕರ ಮನವೊಲಿಕೆಯಲ್ಲಿನ ವಿಫಲತೆ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ಶಾಸಕರ ಅಸಮಾಧಾನ ಪ್ರಮುಖವಾಗಿವೆ. ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ನಾಯಕತ್ವದ ಕೊರತೆಯೂ ಎದ್ದುಕಾಣುತ್ತಿರುವ ಬಗ್ಗೆ ಮಾತುಗಳು ಕೇಳಿಬಂದಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 19, 2026 04:24 PM
Follow Us
Latest Videos
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ

