ಮತದಾನ ಕೇಂದ್ರದ ಬಳಿಯೇ ಸಚಿವ ಮಲ್ಲಿಕಾರ್ಜುನ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

Edited By:

Updated on: Oct 23, 2026 | 6:00 PM

ದಾವಣಗೆರೆ ನಗರದ ಹೈಸ್ಕೂಲ ಮತಗಟ್ಟೆ ಬಳಿ ಸಚಿವ ಎಸ್​​ ಎಸ್​ ಮಲ್ಲಿಕಾರ್ಜುನ ಖರ್ಗೆ ಹಾಗೂ ಎನ್​​ಡಿಯ ಅಭ್ಯರ್ಥಿ ಕೆಎಂ ಸುರೇಶ್ ಮುಖಾಮುಖಿಯಾಗಿದ್ದು, ಈ ವೇಳೆ ಕೆಎಂ ಸುರೇಶ್ ಅವರು ಸಚಿವರಿಗೆ ಕೈ ಮುಗಿದು ಕಾಲು ಮುಟ್ಟಿ ನಮಸ್ಕರಿಸಿ ಗಮನಸೆಳೆದಿದ್ದಾರೆ. ಇದು ದಾವಣಗೆರೆ ಜಿಲ್ಲಾ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ದಾವಣಗೆರೆ, (ಅಕ್ಟೋಬರ್ 23): ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಇಂದು (ಅಕ್ಟೋಬರ್ 23 ಬೆಳಗ್ಗೆ 8 ಗಂಟೆಯಿಂದ ಮತದಾನ ನಡೆದಿತ್ತು. ಇದೀಗ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಇದರ ಮಧ್ಯೆ ಒಂದು ನಡೆದ ರಾಜಕೀಯ ಬೆಳವಣಿಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು….ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ‌‌ ಕೆಎಂ ಸುರೇಶ್ ಅವರು ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಕಾಲಿಗೆ ನಮಸ್ಕರಿಸಿದ್ದಾರೆ.

ದಾವಣಗೆರೆ ನಗರದ ಹೈಸ್ಕೂಲ ಮತಗಟ್ಟೆ ಬಳಿ ಸಚಿವ ಎಸ್​​ ಎಸ್​ ಮಲ್ಲಿಕಾರ್ಜುನ ಖರ್ಗೆ ಹಾಗೂ ಎನ್​​ಡಿಯ ಅಭ್ಯರ್ಥಿ ಕೆಎಂ ಸುರೇಶ್ ಮುಖಾಮುಖಿಯಾಗಿದ್ದು, ಈ ವೇಳೆ ಕೆಎಂ ಸುರೇಶ್ ಅವರು ಸಚಿವರಿಗೆ ಕೈ ಮುಗಿದು ಕಾಲು ಮುಟ್ಟಿ ನಮಸ್ಕರಿಸಿ ಗಮನಸೆಳೆದಿದ್ದಾರೆ. ಇದು ದಾವಣಗೆರೆ ಜಿಲ್ಲಾ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More