AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್ ಚರ್ಚೆ ನಡುವೆ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾದ ಎಂಎಲ್ಸಿ ರಾಜೇಂದ್ರ ರಾಜಣ್ಣ

ಸ್ಟಿಂಗ್ ಚರ್ಚೆ ನಡುವೆ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾದ ಎಂಎಲ್ಸಿ ರಾಜೇಂದ್ರ ರಾಜಣ್ಣ

ಪ್ರಸನ್ನ ಗಾಂವ್ಕರ್​
| Edited By: |

Updated on: Oct 27, 2026 | 6:25 PM

Share

ಸ್ಟಿಂಗ್ ಕಾರ್ಯಾಚರಣೆಯ ಚರ್ಚೆಗಳ ನಡುವೆ, ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ರಾಜಣ್ಣ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ತೀವ್ರ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ಹೊಸ ಊಹಾಪೋಹಗಳಿಗೆ ಕಾರಣವಾಗಿದೆ. ರಾಜಣ್ಣ ಅವರ ಭವಿಷ್ಯದ ರಾಜಕೀಯ ನಡೆಗಳ ಬಗ್ಗೆ ಚರ್ಚೆಗಳು ನಡೆದಿವೆ.

ಬೆಂಗಳೂರು, ಅಕ್ಟೋಬರ್​​ 27: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಕಾರ್ಯಾಚರಣೆಯ ಚರ್ಚೆಗಳು ಹೆಚ್ಚು ಪ್ರಚಲಿತದಲ್ಲಿರುವಾಗಲೇ, ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ರಾಜಣ್ಣ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ರಾಜಣ್ಣ ಪುತ್ರರೂ ಆಗಿರುವ ರಾಜೇಂದ್ರ ಅವರ ಈ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿಂದೆ, ಸ್ಟಿಂಗ್ ಕಾರ್ಯಾಚರಣೆಯ ಕುರಿತು ಕುಮಾರಸ್ವಾಮಿ ಅವರು ಮಾತನಾಡಿದಾಗ, ರಾಜಣ್ಣ ಅವರ ಹೆಸರೂ ಪ್ರಸ್ತಾಪವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಂದ್ರ ರಾಜಣ್ಣ ಅವರ ಭೇಟಿಯು ಮಹತ್ವ ಪಡೆದುಕೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More