ಸ್ಟಿಂಗ್ ಚರ್ಚೆ ನಡುವೆ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾದ ಎಂಎಲ್ಸಿ ರಾಜೇಂದ್ರ ರಾಜಣ್ಣ
ಸ್ಟಿಂಗ್ ಕಾರ್ಯಾಚರಣೆಯ ಚರ್ಚೆಗಳ ನಡುವೆ, ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ರಾಜಣ್ಣ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ತೀವ್ರ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ಹೊಸ ಊಹಾಪೋಹಗಳಿಗೆ ಕಾರಣವಾಗಿದೆ. ರಾಜಣ್ಣ ಅವರ ಭವಿಷ್ಯದ ರಾಜಕೀಯ ನಡೆಗಳ ಬಗ್ಗೆ ಚರ್ಚೆಗಳು ನಡೆದಿವೆ.
ಬೆಂಗಳೂರು, ಅಕ್ಟೋಬರ್ 27: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಕಾರ್ಯಾಚರಣೆಯ ಚರ್ಚೆಗಳು ಹೆಚ್ಚು ಪ್ರಚಲಿತದಲ್ಲಿರುವಾಗಲೇ, ಕಾಂಗ್ರೆಸ್ ಎಂಎಲ್ಸಿ ರಾಜೇಂದ್ರ ರಾಜಣ್ಣ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ರಾಜಣ್ಣ ಪುತ್ರರೂ ಆಗಿರುವ ರಾಜೇಂದ್ರ ಅವರ ಈ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿಂದೆ, ಸ್ಟಿಂಗ್ ಕಾರ್ಯಾಚರಣೆಯ ಕುರಿತು ಕುಮಾರಸ್ವಾಮಿ ಅವರು ಮಾತನಾಡಿದಾಗ, ರಾಜಣ್ಣ ಅವರ ಹೆಸರೂ ಪ್ರಸ್ತಾಪವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಂದ್ರ ರಾಜಣ್ಣ ಅವರ ಭೇಟಿಯು ಮಹತ್ವ ಪಡೆದುಕೊಂಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
