AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಘೇ ಉಘೇ ಮಾದಪ್ಪ: ಮಾದಪ್ಪನ ಸನ್ನಿಧಿಯಲ್ಲಿ ಕೇವಲ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!

ಉಘೇ ಉಘೇ ಮಾದಪ್ಪ: ಮಾದಪ್ಪನ ಸನ್ನಿಧಿಯಲ್ಲಿ ಕೇವಲ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Mar 28, 2026 | 9:13 AM

Share

ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದುಬಂದಿದ್ದರಿಂದ ಕೇವಲ 23 ದಿನಗಳ ಅವಧಿಯಲ್ಲಿ ಮಾದಪ್ಪನ ಹುಂಡಿಗೆ 2.33 ಕೋಟಿ ರೂಪಾಯಿ ನಗದು ಹರಿದುಬಂದಿದ್ದು, ಚಿನ್ನ ಮತ್ತು ಬೆಳ್ಳಿಯ ಕಾಣಿಕೆಯೂ ಭರಪೂರವಾಗಿ ಸಂಗ್ರಹವಾಗಿದೆ. ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ನಡೆದ ಈ ಹುಂಡಿ ಎಣಿಕೆಯ ಮಾಹಿತಿ, ವಿಡಿಯೋ ಇಲ್ಲಿದೆ.

ಚಾಮರಾಜನಗರ, ಮಾರ್ಚ್​ 28: ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಕ್ಷೇತ್ರಕ್ಕೆ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಸರಣಿ ರಜಾ ದಿನಗಳ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು, ಆರಾಧ್ಯ ದೈವ ಮಾದಪ್ಪನಿಗೆ ಒಟ್ಟು ಕೋಟ್ಯಂತರ ರೂಪಾಯಿ ಕಾಣಿಕೆ ಸಮರ್ಪಣೆಯಾಗಿದೆ. ಕೇವಲ 23 ದಿನಗಳ ಅವಧಿಯಲ್ಲಿ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2.33 ಕೋಟಿ ರೂಪಾಯಿ ನಗದು ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಅವರ ಸಮ್ಮುಖದಲ್ಲಿ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಅತ್ಯಂತ ಪಾರದರ್ಶಕವಾಗಿ ಈ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ.

ಸಂಗ್ರಹವಾದ ಒಟ್ಟು ಕಾಣಿಕೆ ವಿವರ

  • ನಗದು: 2,33,84,201 ರೂ.
  • ಚಿನ್ನ: 21 ಗ್ರಾಂ
  • ಬೆಳ್ಳಿ: 800 ಗ್ರಾಂ
  • ಡಿಜಿಟಲ್ ಪಾವತಿ (PhonePe/G-Pay): 5,78,897 ರೂ.
  • ವಿಶೇಷ: ಚಲಾವಣೆ ರದ್ದಾಗಿರುವ 2000 ರೂ. ಮುಖಬೆಲೆಯ 3 ನೋಟುಗಳು ಹಾಗೂ 4 ವಿದೇಶಿ ನೋಟುಗಳು ಸಹ ಹುಂಡಿಯಲ್ಲಿ ಪತ್ತೆಯಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More