AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ಪೋಕ್ಸೊ ಆರೋಪಿ ಬೆದರಿಕೆ: ಆತನಿಗೆ ಮೊಬೈಲ್ ಕೊಟ್ಟವರು ಯಾರು?

ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ಪೋಕ್ಸೊ ಆರೋಪಿ ಬೆದರಿಕೆ: ಆತನಿಗೆ ಮೊಬೈಲ್ ಕೊಟ್ಟವರು ಯಾರು?

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Mar 30, 2026 | 2:07 PM

Share

ಧಾರವಾಡ ಕೇಂದ್ರ ಕಾರಾಗೃಹದಲ್ಲಿದ್ದ ಪೋಕ್ಸೊ ಪ್ರಕರಣದ ಆರೋಪಿಯೊಬ್ಬ ಅಪ್ರಾಪ್ತ ಬಾಲಕಿಗೆ ವಿಡಿಯೋ ಕರೆ ಮಾಡಿ ನಿರಂತರ ಕಿರುಕುಳ ನೀಡಿದ್ದಾನೆ. ಜೈಲಿನಲ್ಲಿ ಮೊಬೈಲ್‌ಗಳ ರಾಜಾರೋಷ ಬಳಕೆಯ ಬಗ್ಗೆ ಇದು ಪುರಾವೆಯಾಗಿದೆ. ಕೋರ್ಟ್‌ನಲ್ಲಿ ತನ್ನ ಪರವಾಗಿ ಮಾತನಾಡಯವಂತೆ ಆತ ಸಂತ್ರಸ್ತೆಯನ್ನು ಒತ್ತಾಯಿಸಿದ್ದಾನೆ ಎಂದು ದೂರಲಾಗಿದೆ.

ಧಾರವಾಡ, ಮಾರ್ಚ್​​ 30: ಕೇಂದ್ರ ಕಾರಾಗೃಹದಲ್ಲಿ ಪೋಕ್ಸೊ ಪ್ರಕರಣದ ಆರೋಪಿಯೊಬ್ಬ ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ವಿಡಿಯೋ ಕರೆ ಮಾಡಿ ನಿರಂತರ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ಈ ಆರೋಪಿಯು ಬಾಲಕಿಗೆ ಬೆದರಿಕೆ ಹಾಕುತ್ತಾ, ನ್ಯಾಯಾಲಯದಲ್ಲಿ ತನ್ನ ಪರವಾಗಿ ಮಾತನಾಡಲು ಒತ್ತಾಯಿಸಿದ್ದಾನೆ. ಆರೋಪಿಯು ತನ್ನ ಕೈ ಮೇಲೆ ಸಂತ್ರಸ್ತೆಯ ಹೆಸರನ್ನು ಬರೆದುಕೊಂಡು ವಿಡಿಯೋ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆಯು ಜೈಲುಗಳಲ್ಲಿ ಮೊಬೈಲ್ ಫೋನ್‌ಗಳ ಸುಲಭ ಲಭ್ಯತೆ ಮತ್ತು ಬಳಕೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸ್ ಅಧಿಕಾರಿಗಳು ಜೈಲುಗಳಲ್ಲಿ ಮೊಬೈಲ್‌ಗಳ ಬಳಕೆಗೆ ಅವಕಾಶವಿಲ್ಲ ಎಂದು ಪದೇ ಪದೇ ಹೇಳುತ್ತಿರುತ್ತಾರೆ. ಆದರೆ, ಈ ಪ್ರಕರಣವು ಇದಕ್ಕೆ ವ್ಯತಿರಿಕ್ತವಾದ ಚಿತ್ರಣವನ್ನು ನೀಡಿದೆ. ಲವ್ ಜಿಹಾದ್ ಆರೋಪವೂ ಕೇಳಿಬಂದಿರುವ ಈ ಪ್ರಕರಣದ ಆರೋಪಿಯು ಬಾಲಕಿಗೆ ನಿರಂತರವಾಗಿ ಹಿಂಸೆ ನೀಡುತ್ತಿದ್ದು, ಆಕೆಯ ಕುಟುಂಬ ಆತಂಕಗೊಂಡಿದೆ. ಜೈಲಾಧಿಕಾರಿಗಳ ಸಹಾಯವಿಲ್ಲದೆ ಇಂತಹ ಕೃತ್ಯ ಅಸಾಧ್ಯ ಎಂದು ಕುಟುಂಬದವರು ಆರೋಪಿಸಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

 

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More