ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿ ಬಳಿ ಮೊಬೈಲ್ ಪತ್ತೆ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಓರ್ವ ಕೈದಿಯ ಬಳಿ ಮೊಬೈಲ್ ಪತ್ತೆಯಾಗಿದೆ. ಡಾ. ಶರಣಪ್ಪ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ನಂತರ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜೈಲುಗಳಲ್ಲಿ ಮೊಬೈಲ್ ಪತ್ತೆಯಾಗುವುದು ಗಂಭೀರ ವಿಚಾರವಾಗಿದ್ದು, ಇದು ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಕಲಬುರಗಿ, ಸೆಪ್ಟೆಂಬರ್ 10: ಪೊಲೀಸ್ ಆಯುಕ್ತ ಡಾ. ಶರಣಪ್ಪ ಅವರ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ರೇಡ್ ವೇಳೆ ಜೈಲಿನ ಬ್ಯಾರಕ್ ನಂಬರ್ 6ರಲ್ಲಿ ಓರ್ವ ಕೈದಿಯ ಬಳಿ ಮೊಬೈಲ್ ಪತ್ತೆಯಾಗಿದೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಜೈಲುಗಳಲ್ಲಿ ಪದೇ ಪದೇ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗುತ್ತಿರುವ ಘಟನೆಗಳು ಕಳವಳಕ್ಕೆ ಕಾರಣವಾಗಿವೆ. ಇದು ಜೈಲು ಆಡಳಿತದ ನಿರ್ವಹಣೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕೈದಿಯ ಬಳಿ ಮೊಬೈಲ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಇದು ಹೇಗೆ ಜೈಲಿಗೆ ತಲುಪಿತು, ಯಾರು ಇದರ ಹಿಂದೆ ಇದ್ದಾರೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

