ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿ ಬಳಿ ಮೊಬೈಲ್ ಪತ್ತೆ

Edited By:

Updated on: Sep 10, 2026 | 11:49 AM

ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಓರ್ವ ಕೈದಿಯ ಬಳಿ ಮೊಬೈಲ್ ಪತ್ತೆಯಾಗಿದೆ. ಡಾ. ಶರಣಪ್ಪ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ನಂತರ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜೈಲುಗಳಲ್ಲಿ ಮೊಬೈಲ್ ಪತ್ತೆಯಾಗುವುದು ಗಂಭೀರ ವಿಚಾರವಾಗಿದ್ದು, ಇದು ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಲಬುರಗಿ, ಸೆಪ್ಟೆಂಬರ್​​ 10: ಪೊಲೀಸ್ ಆಯುಕ್ತ ಡಾ. ಶರಣಪ್ಪ ಅವರ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ರೇಡ್​​ ವೇಳೆ ಜೈಲಿನ ಬ್ಯಾರಕ್ ನಂಬರ್ 6ರಲ್ಲಿ ಓರ್ವ ಕೈದಿಯ ಬಳಿ ಮೊಬೈಲ್ ಪತ್ತೆಯಾಗಿದೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಜೈಲುಗಳಲ್ಲಿ ಪದೇ ಪದೇ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗುತ್ತಿರುವ ಘಟನೆಗಳು ಕಳವಳಕ್ಕೆ ಕಾರಣವಾಗಿವೆ. ಇದು ಜೈಲು ಆಡಳಿತದ ನಿರ್ವಹಣೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕೈದಿಯ ಬಳಿ ಮೊಬೈಲ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಇದು ಹೇಗೆ ಜೈಲಿಗೆ ತಲುಪಿತು, ಯಾರು ಇದರ ಹಿಂದೆ ಇದ್ದಾರೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More