ಕಲಬುರಗಿ ಸೆಂಟ್ರಲ್ ಜೈಲಿನ ಮೇಲೆ ದಾಳಿ ನಡೆಸಿ ಫೋನ್ ಮತ್ತು ರಾಡ್ ವಶಪಡಿಸಿಕೊಳ್ಳಲಾಗಿದೆ: ಪೊಲೀಸ್ ಕಮೀಶನರ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 15, 2024 | 10:42 AM

ಡಾ ಶರಣಪ್ಪ ಕಾರಾಗೃಹದ ಮೇಲೆ ನಡೆದ ದಾಳಿಯ ಸಮಗ್ರ ಮಾಹಿತಿಯನ್ನು ನೀಡಲಿಲ್ಲ, ಪ್ರಾಥಮಿಕ ಹಂತದ ತನಿಖೆ ನಡೆಯುತ್ತಿದೆ ಅದು ಮುಗಿದ ಬಳಿಕ ಮಾಹಿತಿಯನ್ನು ಮಾಧ್ಯಮಗಳಿಗೆ ಒದಗಿಸುವುದಾಗಿ ಅವರು ಹೇಳಿದರು. ಎಲ್ಲ ಸೆಂಟ್ರಲ್ ಜೈಲುಗಳಲ್ಲಿ ಅವ್ಯವಹಾರಗಳು ನಡೆಯುತ್ತಿರೋದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ.

ಕಲಬುರಗಿ: ಇಲ್ಲಿನ ಸೆಂಟ್ರಲ್ ಜೈಲಿನಲ್ಲಿ ಅವ್ಯವಹಾರಗಳು ನಡೆಯುತ್ತಿರುವ, ಗಾಂಜಾ ಮತ್ತು ಇತರ ಮಾದಕ ವಸ್ತುಗಳ ಸೇವನೆ ಕೈದಿಗಳು ಅವ್ಯಾಹತವಾಗಿ ಮಾಡುತ್ತಿರುವ ಫೋಟೋ ವೈರಲ್ ಆದ ನಂತರ ಜಿಲ್ಲಾ ಪೊಲೀಸ್ ಸೆರೆಮನೆಯ ಮೇಲೆ ದಾಳಿ ನಡೆಸಿದ ಸಂಗತಿಯನ್ನು ಕಲಬುರಗಿ ಪೊಲೀಸ್ ಕಮೀಶನರ್ ಡಾ ಶರಣಪ್ಪ ಎಸ್ ಡಿ ಮಾಧ್ಯಮಗಳಿಗೆ ತಿಳಿಸಿದರು. ಅಧಿಕಾರಿ ಹೇಳುವ ಪ್ರಕಾರ ಕೈದಿಗಳಿಂದ ಎರಡು ಮೊಬೈಲ್ ಫೋನ್, ಸಿಗರೇಟು ಮತ್ತು ಬೀಡಿ ಪ್ಯಾಕೆಟ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ ಇಲ್ಲಿದೆ  

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.