ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ? ಮಹತ್ವದ ನಿರ್ಧಾರಕ್ಕೆ ಮುಂದಾದ ಇಲಾಖೆ

Edited By:

Updated on: Jan 19, 2026 | 1:32 PM

ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ, ಶಿಕ್ಷಣ ಇಲಾಖೆಯು ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲು ಮುಂದಾಗಿದೆ. ಜನವರಿ 27ರಿಂದ ನಡೆಯುವ ರಾಜ್ಯಮಟ್ಟದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೂಡ ಮೊಬೈಲ್ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಲು ಮುಂದಾಗಿದೆ. ಪರೀಕ್ಷೆಗಳ ಪಾವಿತ್ರ‍್ಯತೆ ಕಾಪಾಡಲು ಈ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಬೆಂಗಳೂರು, ಜನವರಿ 19: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮವು ಜನವರಿ 27ರಿಂದ ನಡೆಯಲಿರುವ ಎರಡನೇ ಹಂತದ ರಾಜ್ಯಮಟ್ಟದ ಪಿಯು ಪರೀಕ್ಷೆಗಳಿಂದ ಜಾರಿಗೆ ಬರಲಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸೋರಿಕೆಯಾಗುವುದನ್ನು ತಡೆಯಲು ಈ ನಿಷೇಧವನ್ನು ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರು, ಪ್ರಾಂಶುಪಾಲರು ಸೇರಿದಂತೆ ಎಲ್ಲ ಸಿಬ್ಬಂದಿಯ ಮೊಬೈಲ್ ಬಳಕೆಗೆ ಕಡಿವಾಣ ಹಾಕಲಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ