ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಬೆಂಗಳೂರು ನಗರದಲ್ಲಿ ಮಧ್ಯಾಹ್ನ ಸುರಿಯಲಾರಂಭಿಸಿದ ಮಳೆ

ಅರುಣ್​ ಕುಮಾರ್​ ಬೆಳ್ಳಿ

Updated on: Aug 29, 2024 | 5:32 PM

ಶಾಲೆಗಳ ಸಮಯ ಮುಗಿಯುವಾಗ ಮಳೆ ಸುರಿಯಲು ಆರಂಭಿಸಿದ ಕಾರಣ ಮಕ್ಕಳು ಮನೆಗಳಿಗೆ ಹೋಗಲು ಪರದಾಡುವ ಸ್ಥಿತಿ ನಗರದಲ್ಲಿ ನಿರ್ಮಾಣವಾಯಿತು. ಶಾಲಾ ಬಸ್​ ಗಳಲ್ಲಿ ಮನೆಗೆ ಹೋಗುವ ಮಕ್ಕಳೇನೋ ಸೇಫಾಗಿ ಹೋಗಿಬಿಡುತ್ತಾರೆ. ಆದರೆ ಬಸ್ ಗಳನ್ನು ಆಶ್ರಯಿಸಿಕೊಳ್ಳುವ ಮಕ್ಕಳಿಗೆ ಸಮಸ್ಯೆ ಉಂಟಾಯಿತು

ಬೆಂಗಳೂರು: ಕೆಲ ದಿನಗಳಿಂದ ನಗರದಲ್ಲಿ ಕಾಣೆಯಾಗಿದ್ದ ಮಳೆ ಇವತ್ತು ಮಧ್ಯಾಹ್ನ ದಿಢೀರನೆ ಸುರಿಯಲಾರಂಭಿಸಿತು. ನಮ್ಮ ವರದಿಗಾರ ಬಿಬಿಎಂಪಿ ಮುಂಭಾಗದಲ್ಲಿ ನಿಂತು ಕಾರ್ಪೋರೇಶನ್ ಸರ್ಕಲ್ ನಲ್ಲಿ ಕಂಡ ಮಳೆ ದೃಶ್ಯದ ವಿವರಣೆ ನೀಡಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಮತ್ತು ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬೆಂಗಳೂರಿನಲ್ಲಿ ವರುಣನ ಅಬ್ಬರ: ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಟ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.