ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕರ್ನಾಟಕ ಬಿಜೆಪಿ ಕಚೇರಿಯಲ್ಲಿ ಕಲೆ ಮತ್ತು ಸಾಂಸ್ಕ್ರತಿಕ ಪ್ರಕೋಷ್ಠ ವತಿಯಿಂದ ಚಿತ್ರಕಲಾ ಶಿಬಿರ ಮತ್ತು ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ರಂಗೋಲಿಯಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರ ಬಿಡಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜನ್ಮದಿನ ಪ್ರಯುಕ್ತ ಕರ್ನಾಟಕ ಬಿಜೆಪಿ ಕಚೇರಿಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕಲೆ ಮತ್ತು ಸಾಂಸ್ಕ್ರತಿಕ ಪ್ರಕೋಷ್ಠ ವತಿಯಿಂದ ಚಿತ್ರಕಲಾ ಶಿಬಿರ ಮತ್ತು ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ರಂಗೋಲಿಯಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರ ಬಿಡಿಸಲಾಗಿದೆ. ಹಾಗೆ ಪೇಟಿಂಗ್ನಲ್ಲಿ ಅವರ ಭಾವಚಿತ್ರಗಳು ಮೂಡಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.0 ಸರ್ಕಾರದ 100 ದಿನ ಸಾಧನೆಗಳನ್ನು ಬರೆದು ಹಾಕಲಾಗಿದೆ. ಚಿತ್ರಕಲಾ ಶಿಬಿರ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಸೇರಿಂದಂತೆ ಬಿಜೆಪಿಯ ಇನ್ನು ಅನೇಕ ಮುಖಂಡರು ಭಾಗಿಯಾಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ