AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ

ಮೋದಿ ಸರ್ಕಾರ ರೈತರ ಪರ, ಎಥೆನಾಲ್ ಖರೀದಿಯಲ್ಲಿ ಹೊಸ ದಾಖಲೆ: ಪ್ರಲ್ಹಾದ್ ಜೋಶಿ

ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 17, 2026 | 12:10 PM

Share

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಧಾನಿ ಮೋದಿ ಸರ್ಕಾರ ರೈತರ ಪರವಾಗಿದೆ ಎಂದು ಪುನರುಚ್ಚರಿಸಿದ್ದಾರೆ. ಸರ್ಕಾರವು 1200 ಕೋಟಿ ಲೀಟರ್ ಎಥೆನಾಲ್ ಖರೀದಿಸುತ್ತಿದ್ದು, ಇದು 2014ಕ್ಕಿಂತ ಹಿಂದಿನ ಸರ್ಕಾರಕ್ಕಿಂತ ಗಣನೀಯ ಹೆಚ್ಚಳವಾಗಿದೆ. ಭತ್ತ, ಗೋಧಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದೆ. ಕಬ್ಬು ಬೆಳೆಗಾರರ ಹಿತ ಕಾಯಲು ಮತ್ತು ಗ್ರಾಹಕರ ಹಿತಾಸಕ್ತಿಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿ, ಅಕ್ಟೋಬರ್ 17: ನರೇಂದ್ರ ಮೋದಿ ಸರ್ಕಾರವು ಸದಾ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಸರ್ಕಾರದ ಈ ಬದ್ಧತೆಯು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಮೂಲಕ ಭತ್ತ ಮತ್ತು ಗೋಧಿಯಂತಹ ಬೆಳೆಗಳ ಬೃಹತ್ ಖರೀದಿಯಲ್ಲಿ ಸ್ಪಷ್ಟವಾಗಿದೆ ಎಂದರು. ಸಂಗ್ರಹಣೆಯ ಸಮಸ್ಯೆಗಳ ಹೊರತಾಗಿಯೂ ಸರ್ಕಾರವು ರೈತರಿಂದ ಉತ್ಪನ್ನಗಳನ್ನು ಖರೀದಿಸುವುದನ್ನು ಮುಂದುವರೆಸಿದೆ ಎಂದು ಜೋಶಿ ಉಲ್ಲೇಖಿಸಿದ್ದಾರೆ.

ವಿಶೇಷವಾಗಿ ಎಥೆನಾಲ್ ಖರೀದಿಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ. 2014ಕ್ಕಿಂತ ಮೊದಲು ಕೇವಲ 38 ಕೋಟಿ ಲೀಟರ್ ಎಥೆನಾಲ್ ಖರೀದಿಸಲಾಗುತ್ತಿತ್ತು. ಆದರೆ, ಮೋದಿ ಸರ್ಕಾರವು ಈಗ 1200 ಕೋಟಿ ಲೀಟರ್ ಎಥೆನಾಲ್ ಖರೀದಿಸುತ್ತಿದೆ. ಇದರಲ್ಲಿ ಕರ್ನಾಟಕದಿಂದಲೇ 165 ಕೋಟಿ ಲೀಟರ್ ಎಥೆನಾಲ್ ಖರೀದಿ ಮಾಡಲಾಗಿದೆ. ಇದರಿಂದ ಕಬ್ಬು ಬೆಳೆಗಾರರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದರು.

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಿ ದೆಹಲಿಯಲ್ಲಿ ನಡೆದ ಸಭೆಯ ನಂತರ ಸಮಿತಿಯನ್ನು ರಚಿಸಲಾಗಿದೆ. ರೈತರ ಮತ್ತು ಬಳಕೆದಾರರ ಹಿತಾಸಕ್ತಿಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More