ಕಾಂಗ್ರೆಸ್​ ಪಕ್ಷದ ಕುಟುಂಬ ರಾಜಕಾರಣ ವಿರೋಧಿಸಿದ್ದ ಮೋದಿ ಯಡಿಯೂರಪ್ಪ ಪುತ್ರನಿಗೆ ಟಿಕೆಟ್ ನೀಡಿದ್ದಾರೆ -ಕೆಎಸ್​ ಈಶ್ವರಪ್ಪ

ಶಿವಮೊಗ್ಗದ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಣಕ್ಕೆ ಇಳಿದಿದ್ದಾರೆ. ಕೆಎಸ್ ಈಶ್ವರಪ್ಪನವರು ಇಂದು ಶಿವಮೊಗ್ಗದ ಬೀಳಗಿ ಮಠಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗಲ್ಲ ಎಂದಿದ್ದಾರೆ. ಕಾಂಗ್ರೆಸ್​ ಪಕ್ಷದ ಕುಟುಂಬ ರಾಜಕಾರಣ ಮೋದಿ ವಿರೋಧಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಯಡಿಯೂರಪ್ಪ ಪುತ್ರನಿಗೆ ಟಿಕೆಟ್ ನೀಡಿದ್ದಾರೆ ಎಂದರು.

ಕಾಂಗ್ರೆಸ್​ ಪಕ್ಷದ ಕುಟುಂಬ ರಾಜಕಾರಣ ವಿರೋಧಿಸಿದ್ದ ಮೋದಿ ಯಡಿಯೂರಪ್ಪ ಪುತ್ರನಿಗೆ ಟಿಕೆಟ್ ನೀಡಿದ್ದಾರೆ -ಕೆಎಸ್​ ಈಶ್ವರಪ್ಪ
| Updated By: ಆಯೇಷಾ ಬಾನು

Updated on: Mar 18, 2024 | 11:35 AM

ಶಿವಮೊಗ್ಗ, ಮಾರ್ಚ್​.18: ಶಿವಮೊಗ್ಗದ ಬೀಳಗಿ ಮಠಕ್ಕೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಅವರು, ಇಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗಲ್ಲ. ಕುಟುಂಬ ರಾಜಕಾರಣದ ‌ವಿರುದ್ಧ ನನ್ನ ಹೋರಾಟ. ಸಿ.ಟಿ.ರವಿ, ಯತ್ನಾಳ್, ನಳಿನ್​ಕುಮಾರ್​ ಕಟೀಲುಗೆ ಟಿಕೆಟ್ ನೀಡಿಲ್ಲ. ಕಾಂಗ್ರೆಸ್​ ಪಕ್ಷದ ಕುಟುಂಬ ರಾಜಕಾರಣ ಮೋದಿ ವಿರೋಧಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಯಡಿಯೂರಪ್ಪ ಪುತ್ರನಿಗೆ ಟಿಕೆಟ್ ನೀಡಿದ್ದಾರೆ. ಹೀಗಾಗಿ ಪಕ್ಷೇತರ ಸ್ಪರ್ಧಿಸುತ್ತೇನೆ, ಗೆದ್ದು ಮೋದಿ ಕೈಬಲಪಡಿಸುತ್ತೇನೆ. ಕೇಂದ್ರದ ನಾಯಕರು ಕರೆ ಮಾಡಿದ್ದಾರೆ, ಸ್ಪಷ್ಟ ನಿರ್ಧಾರ ತಿಳಿಸಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us