Modi Ukraine Visit: ಕೈವ್ಗೆ ಬಂದಿಳಿದ ಪ್ರಧಾನಿ ಮೋದಿಗೆ ಕೈ ಮುಗಿದು ಸ್ವಾಗತಿಸಿದ ಉಕ್ರೇನ್ ಅಧಿಕಾರಿಗಳು
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯುದ್ಧ ಪೀಡಿತ ಉಕ್ರೇನ್‌ಗೆ ಆಗಮಿಸಿದ್ದು, ಕೈವ್ ರೈಲು ನಿಲ್ದಾಣದಲ್ಲಿ ಅವರಿಗೆ ಕೈ ಮುಗಿದು ನಮಸ್ಕಾರ ಮಾಡಿ ಉಕ್ರೇನ್ನ ಅಧಿಕಾರಿಗಳು ಸ್ವಾಗತಿಸಿರುವ ಫೋಟೋಗಳು, ವಿಡಿಯೋಗಳು ವೈರಲ್ ಆಗಿವೆ. ಇದಾದ ಬಳಿಕ ಪ್ರಧಾನಿ ಮೋದಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಯುದ್ಧ ಪೀಡಿತ ದೇಶವಾದ ಉಕ್ರೇನ್‌ಗೆ ತೆರಳಿದ್ದಾರೆ. ವಿಶೇಷ ರೈಲಿನಲ್ಲಿ ಕೈವ್ ತಲುಪಿದ ಅವರನ್ನು ಅಲ್ಲಿನ ಅಧಿಕಾರಿಗಳು ಕೈ ಮುಗಿದು, ಭಾರತೀಯ ಶೈಲಿಯಲ್ಲಿಯೇ ಸ್ವಾಗತಿಸಿದ್ದಾರೆ. ಉಕ್ರೇನ್‌ಗೆ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರ ಈ ಪ್ರವಾಸ ಭಾರೀ ಮಹತ್ವ ಪಡೆದಿದೆ.
1991ರಲ್ಲಿ ಉಕ್ರೇನ್ ಸ್ವತಂತ್ರವಾದ ನಂತರ ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ನೀಡಿದ ಮೊದಲ ಭೇಟಿ ಇದಾಗಿದೆ. ಈ ವೇಳೆ ಮೋದಿ ಅವರು ಉಕ್ರೇನ್‌ನಲ್ಲಿರುವ ಭಾರತೀಯ ವಲಸಿಗರಿಗೆ ಶುಭಾಶಯ ಕೋರುತ್ತಿರುವ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ರಿಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos