Modi Ukraine Visit: ಕೈವ್​ಗೆ ಬಂದಿಳಿದ ಪ್ರಧಾನಿ ಮೋದಿಗೆ ಕೈ ಮುಗಿದು ಸ್ವಾಗತಿಸಿದ ಉಕ್ರೇನ್ ಅಧಿಕಾರಿಗಳು

|

Updated on: Aug 23, 2024 | 3:12 PM

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯುದ್ಧ ಪೀಡಿತ ಉಕ್ರೇನ್‌ಗೆ ಆಗಮಿಸಿದ್ದು, ಕೈವ್ ರೈಲು ನಿಲ್ದಾಣದಲ್ಲಿ ಅವರಿಗೆ ಕೈ ಮುಗಿದು ನಮಸ್ಕಾರ ಮಾಡಿ ಉಕ್ರೇನ್​ನ ಅಧಿಕಾರಿಗಳು ಸ್ವಾಗತಿಸಿರುವ ಫೋಟೋಗಳು, ವಿಡಿಯೋಗಳು ವೈರಲ್ ಆಗಿವೆ. ಇದಾದ ಬಳಿಕ ಪ್ರಧಾನಿ ಮೋದಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಯುದ್ಧ ಪೀಡಿತ ದೇಶವಾದ ಉಕ್ರೇನ್​ಗೆ ತೆರಳಿದ್ದಾರೆ. ವಿಶೇಷ ರೈಲಿನಲ್ಲಿ ಕೈವ್ ತಲುಪಿದ ಅವರನ್ನು ಅಲ್ಲಿನ ಅಧಿಕಾರಿಗಳು ಕೈ ಮುಗಿದು, ಭಾರತೀಯ ಶೈಲಿಯಲ್ಲಿಯೇ ಸ್ವಾಗತಿಸಿದ್ದಾರೆ. ಉಕ್ರೇನ್​ಗೆ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರ ಈ ಪ್ರವಾಸ ಭಾರೀ ಮಹತ್ವ ಪಡೆದಿದೆ.

1991ರಲ್ಲಿ ಉಕ್ರೇನ್ ಸ್ವತಂತ್ರವಾದ ನಂತರ ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ನೀಡಿದ ಮೊದಲ ಭೇಟಿ ಇದಾಗಿದೆ. ಈ ವೇಳೆ ಮೋದಿ ಅವರು ಉಕ್ರೇನ್‌ನಲ್ಲಿರುವ ಭಾರತೀಯ ವಲಸಿಗರಿಗೆ ಶುಭಾಶಯ ಕೋರುತ್ತಿರುವ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ರಿಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us on