‘ಮೋದಿ ಮಾತ್ರ ಅಲ್ಲ, ಅವರಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ’; ವೇದಿಕೆಯಲ್ಲೇ ರೊಚ್ಚಿಗೆದ್ದ ಮಲ್ಲಿಕಾರ್ಜುನ ಖರ್ಗೆ

Updated on: Oct 25, 2026 | 5:47 PM

ಪಾಟ್ನಾದಲ್ಲಿ ಬಿಹಾರದ ಮೊದಲ ಮುಖ್ಯಮಂತ್ರಿ ಡಾ. ಶ್ರೀ ಕೃಷ್ಣ ಸಿಂಗ್ ಅವರ 139ನೇ ಜಯಂತಿ ಸಭೆಯನ್ನು ಉದ್ದೇಶಿಸಿ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದರು. ಈ ವೇಳೆ ಸಭೆಯಲ್ಲಿದ್ದ ವ್ಯಕ್ತಿಯೊಬ್ಬರು ಮಧ್ಯಪ್ರವೇಶಿಸಿ ಮೋದಿ ಪರ ಘೋಷಣೆ ಕೂಗಿದಾಗ ವೇದಿಕೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಈ ಘಟನೆಯಿಂದಾಗಿ ಸಭೆಯಲ್ಲಿ ಕೆಲಕಾಲ ತೀವ್ರ ಗದ್ದಲ ಉಂಟಾಯಿತು. ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದ ವ್ಯಕ್ತಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.

ಪಾಟ್ನಾ, ಅಕ್ಟೋಬರ್ 25: ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆಗ ಆ ಸಭಾಂಗಣದಲ್ಲಿದ್ದ ವ್ಯಕ್ತಿಯೊಬ್ಬರು “ಮೋದಿ ಎಲ್ಲಿಗೂ ಹೋಗುವುದಿಲ್ಲ, ಅವರು ಮುಂದೆಯೂ ಅಧಿಕಾರ ನಡೆಸುತ್ತಾರೆ” ಎಂದು ಜೋರಾಗಿ ಕಿರುಚುತ್ತಾ ಖರ್ಗೆಯ ಭಾಷಣಕ್ಕೆ ಅಡ್ಡಿಪಡಿಸಿದರು. ಇದರಿಂದ ರೊಚ್ಚಿಗೆದ್ದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮೋದಿ ಮಾತ್ರ ಅಲ್ಲ ಅವರಪ್ಪನೂ ಅಧಿಕಾರದಿಂದ ಇಳಿಬೇಕು, ನಡಿ ನೀನು” ಎಂದು ಹೇಳಿದ್ದಾರೆ. ಈ ಹೇಳಿಕೆಯ ವಿಡಿಯೋ ಭಾರೀ ವೈರಲ್ ಆಗಿದೆ.

ಪಾಟ್ನಾದಲ್ಲಿ ಬಿಹಾರದ ಮೊದಲ ಮುಖ್ಯಮಂತ್ರಿ ಡಾ. ಶ್ರೀ ಕೃಷ್ಣ ಸಿಂಗ್ ಅವರ 139ನೇ ಜಯಂತಿ ಸಭೆಯನ್ನು ಉದ್ದೇಶಿಸಿ ಖರ್ಗೆ ಮಾತನಾಡುತ್ತಿದ್ದರು. ಈ ವೇಳೆ ಸಭೆಯಲ್ಲಿದ್ದ ವ್ಯಕ್ತಿಯೊಬ್ಬರು ಮಧ್ಯಪ್ರವೇಶಿಸಿ ಮೋದಿ ಪರ ಘೋಷಣೆ ಕೂಗಿದಾಗ ವೇದಿಕೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಈ ಘಟನೆಯಿಂದಾಗಿ ಸಭೆಯಲ್ಲಿ ಕೆಲಕಾಲ ತೀವ್ರ ಗದ್ದಲ ಉಂಟಾಯಿತು. ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದ ವ್ಯಕ್ತಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More