PM Modi in Poland: ಗುಜರಾತಿ ನೃತ್ಯದ ಮೂಲಕ ಮೋದಿಗೆ ಸರ್​ಪ್ರೈಸ್ ನೀಡಿದ ಪೋಲೆಂಡ್ ಕಲಾವಿದರು

Updated on: Aug 21, 2024 | 6:57 PM

Narendra Modi Poland Visit: 2 ದಿನಗಳ ಪ್ರವಾಸಕ್ಕಾಗಿ ಪೋಲೆಂಡ್​ಗೆ ತೆರಳಿರುವ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಲೆಂಡ್​ನಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಅಲ್ಲಿನ ಕಲಾವಿದರು ಭಾರತೀಯ ಸಾಂಪ್ರದಾಯಿಕ ನೃತ್ಯ ಮಾಡುವ ಮೂಲಕ ಮೋದಿಯವರನ್ನು ಸ್ವಾಗತಿಸಿದ್ದಾರೆ. ಗುಜರಾತಿ ಶೈಲಿಯ ನೃತ್ಯ ಮಾಡಿದ ಪೋಲೆಂಡ್​ ಕಲಾವಿದರನ್ನು ನೋಡಿ ಮೋದಿ ಅಚ್ಚರಿಗೊಂಡಿದ್ದಾರೆ.

ಪೋಲೆಂಡ್​ನ ವಾರ್ಸಾದಲ್ಲಿರುವ ಹೋಟೆಲ್​ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಟೆಲ್‌ನಲ್ಲಿ ಭಾರತೀಯ ಡಯಾಸ್ಪೊರಾ ಸದಸ್ಯರು ಸ್ವಾಗತಿಸಿದ್ದಾರೆ. ಈ ವೇಳೆ ಭಾರತೀಯ ಸಾಂಪ್ರದಾಯಿಕ ನೃತ್ಯವನ್ನು ಪ್ರದರ್ಶಿಸುವ ಮೂಲಕ ಪೋಲೆಂಡ್​ನ ನೃತ್ಯ ಕಲಾವಿದರು ನರೇಂದ್ರ ಮೋದಿಯವರಿಗೆ ಸರ್​ಪ್ರೈಸ್ ನೀಡಿದ್ದಾರೆ. ದೂರದ ಪೋಲೆಂಡ್​ನಲ್ಲಿ ಭಾರತೀಯ ಸಂಸ್ಕೃತಿಯ ಅನಾವರಣವನ್ನು ಕಂಡು ಖುಷಿಯಿಂದ ಮೋದಿ ಚಪ್ಪಾಳೆ ತಟ್ಟಿ, ಕಲಾವಿದರಿಗೆ ಶಹಬ್ಬಾಸ್ ಹೇಳಿದ್ದಾರೆ.

ಪ್ರಧಾನಿ ಮೋದಿ ಪೋಲೆಂಡ್‌ಗೆ ಎರಡು ದಿನಗಳ ಅಧಿಕೃತ ಭೇಟಿಯಲ್ಲಿದ್ದಾರೆ. ಕಳೆದ 45 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಈ ಹಿನ್ನೆಲೆಯಲ್ಲಿ ಈ ಭೇಟಿ ಬಹಳ ಪ್ರಾಮುಖ್ಯತೆ ಪಡೆದಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 21, 2024 06:56 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More