ಗುಜರಾತ್‌ನ ಸೂರತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಬೃಹತ್ ರೋಡ್‌ಶೋ (Surat Road Show) ನಡೆಸಿದರು. ರಾತ್ರಿಯಾದರೂ ರಸ್ತೆಗಳ ಪಕ್ಕದಲ್ಲಿ, ಕಟ್ಟಡಗಳ ಮೇಲೆ ನಿಂತುಕೊಂಡು ಲಕ್ಷಾಂತರ ಜನರು ಮೋದಿಯನ್ನು ಸ್ವಾಗತಿಸುತ್ತಿರುವ ವಿಡಿಯೋ, ಫೋಟೋಗಳು ವೈರಲ್ ಆಗಿವೆ. ಅಲ್ಲದೆ, ಜನರು ‘ಮೋದಿ ಮೋದಿ’ ಎಂದು ಜೋರಾಗಿ ಘೋಷಣೆ ಕೂಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರಿನ ಡೋರ್ನಲ್ಲಿ ನಿಂತುಕೊಂಡು ರಸ್ತೆಯುದ್ದಕ್ಕೂ ಜನರತ್ತ ಕೈಬೀಸಿದ್ದಾರೆ. ಸೂರತ್‌ನ 12 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 1ರಂದು ಮೊದಲ ಹಂತದ ಚುನಾವಣೆಯಲ್ಲಿ ಮತದಾನ ನಡೆಯಲಿದೆ.