ಕುವೈತ್ನಲ್ಲಿ ಅರೇಬಿಕ್ ಭಾಷೆಗೆ ಅನುವಾದಿಸಿರುವ ರಾಮಾಯಣ ಮತ್ತು ಮಹಾಭಾರತಕ್ಕೆ ಮೋದಿ ಸಹಿ
ಪ್ರಧಾನಿ ಮೋದಿ ಅವರು ಕುವೈತ್‌ಗೆ ಐತಿಹಾಸಿಕ ಭೇಟಿ ನೀಡಿದ್ದಾರೆ. 43 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿದ್ದಾರೆ. ಈ ಮೂಲಕ ಭಾರತದ ಸಂಬಂಧವನ್ನು ಇನ್ನಷ್ಟು ಉತ್ತಮಗೊಳಿಸುವ ಸಲುವಾಗಿ ಈ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರನ್ನು ಕುವೈತ್ ಪ್ರಜೆಗಳಿಬ್ಬರು ಭೇಟಿಯಾಗಿ ಅರೇಬಿಕ್ ಭಾಷೆಯಲ್ಲಿ ಅನುವಾದಿಸಿರುವ ರಾಮಾಯಣ ಮತ್ತು ಮಹಾಭಾರತ ಪುಸ್ತಕಕ್ಕೆ ಸಹಿ ಪಡೆದುಕೊಂಡಿದ್ದಾರೆ, ಈ ವಿಡಿಯೋ ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು 43 ವರ್ಷಗಳ ಭಾರತದ ಪ್ರಧಾನಿಯೊಬ್ಬರು ಮೊದಲು ಬಾರಿ ಕುವೈತ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಡಿಸೆಂಬರ್ 21 ಮತ್ತು 22 ರಂದು ಕುವೈತ್‌ಗೆ ಪ್ರವಾಸ ಕೈಗೊಂಡಿದ್ದಾರೆ. ಕುವೈತ್‌ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅಲ್ಲಿಗೆ ಹೋಗುತ್ತಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಅನಿವಾಸಿ ಭಾರತೀಯರು ಸ್ವಾಗತ ಕೋರಿದ್ದಾರೆ. ಈ ವೇಳೆ ಬ್ದುಲ್ಲಾ ಅಲ್ ಬರೌನ್ ಮತ್ತು ಅಬ್ದುಲ್ ಲತೀಫ್ ಅಲ್ ನೆಸೆಫ್ ಎಂಬುವವರು ಮೋದಿಯನ್ನು ಭೇಟಿಯಾಗಿ ಪ್ರಧಾನಿ ಮೋದಿ ಅವರಿಗೆ ಅರೇಬಿಕ್ ಭಾಷೆಯಲ್ಲಿ ಅನುವಾದಿಸಿರುವ ರಾಮಾಯಣ ಮತ್ತು ಮಹಾಭಾರತವನ್ನು ನೀಡಿ ಅದಕ್ಕೆ ಅವರಿಂದ ಸಹಿ ಪಡೆದಿದ್ದಾರೆ. ಇದೀಗ ಈ ವಿಶೇಷವಾದ ಕ್ಷಣ ವಿಡಿಯೋ ವೈರಲ್ ಆಗಿದೆ. ಅದು ಇಲ್ಲಿದೆ ನೋಡಿ
Loading...
Unable to load recommendations.
Follow Us