ನೀವು ಚುನಾವಣೆಗಾಗಿ ಮಾತ್ರ, ನಾವು ದೇಶಕ್ಕಾಗಿ: ಬಿಜೆಪಿ ವಿರುದ್ಧ ಗುಡುಗಿದ ಪ್ರಿಯಾಂಕಾ ಗಾಂಧಿ
ದೆಹಲಿ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ವಂದೇ ಮಾತರಂ 150ನೇ ವಾರ್ಷಿಕೋತ್ಸವದ ಕುರಿತು ಪ್ರಧಾನಿ ಮೋದಿ ಭಾಷಣ ಮಾಡಿದರು. ಇದಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದ ಅವರು, ಬಿಜೆಪಿ ಚುನಾವಣೆಗಾಗಿ ಹೋರಾಡುತ್ತದೆ, ನಾವು ದೇಶಕ್ಕಾಗಿ ಹೋರಾಡುತ್ತೇವೆ ಎಂದು ಸಿದ್ಧಾಂತದ ಸಂಘರ್ಷವನ್ನು ಎತ್ತಿ ತೋರಿಸಿದ್ದಾರೆ.
ದೆಹಲಿ,ಡಿ.8: ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶ ನಡೆಯುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಕುರಿತು ಮಾತನಾಡಿದರು.ವಂದೇ ಮಾತರಂ(Vande Mataram) ಗೀತೆಯು ಬ್ರಿಟಿಷರ ಎದುರು ಬಂಡೆಯಂತೆ ನಿಂತಿತ್ತು ಎಂದು ಹೇಳಿದರು. ಇದೀಗ ಈ ಬಗ್ಗೆ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ. ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಮಾತ್ರ ಅವರು ಬಯಸುತ್ತಾರೆ. ಅದಕ್ಕಾಗಿಯೇ ಇಂದು ನಾವು ವಂದೇ ಮಾತರಂ ಬಗ್ಗೆ ಚರ್ಚಿಸುತ್ತಿದ್ದೇವೆ. ಅವರು ಉತ್ತಮ ಭಾಷಣಕಾರರು, ಆದರೆ ಸತ್ಯವನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ. ಬಿಜೆಪಿ ಚುನಾವಣೆಗಾಗಿ ಮಾತ್ರ, ನಾವು ದೇಶಕ್ಕಾಗಿ, ನಾವು ಎಷ್ಟೇ ಚುನಾವಣೆಗಳಲ್ಲಿ ಸೋತರೂ, ನಾವು ಇಲ್ಲಿ ಕುಳಿತು ನಿಮ್ಮ ಮತ್ತು ನಿಮ್ಮ ಸಿದ್ಧಾಂತದ ವಿರುದ್ಧ ಹೋರಾಡುತ್ತಲೇ ಇರುತ್ತೇವೆ. ನಾವು ನಮ್ಮ ದೇಶಕ್ಕಾಗಿ ಹೋರಾಡುತ್ತಲೇ ಇರುತ್ತೇವೆ. ನೀವು ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ