W,W,W,W,W,W,W,W: ವಿಕೆಟ್ ಮೇಲೆ ವಿಕೆಟ್: ಶಮಿ ಬೆಂಕಿ ಬೌಲಿಂಗ್
Mohammed Shami: ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು-ಕಾಶ್ಮೀರ ತಂಡಕ್ಕೆ ಮೊಹಮ್ಮದ್ ಶಮಿ ಆಘಾತದ ಮೇಲೆ ಆಘಾತ ನೀಡಿದರು. ಪರಿಣಾಮ ಮೊದಲ ಇನಿಂಗ್ಸ್ನಲ್ಲಿ ಜಮ್ಮು-ಕಾಶ್ಮೀರ ತಂಡವು 302 ರನ್ಗಳಿಸಿ ಆಲೌಟ್ ಆಗಿದೆ. ಬೆಂಗಾಲ್ ಪರ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಶಮಿ 22.1 ಓವರ್ಗಳಲ್ಲಿ 90 ರನ್ ನೀಡಿ ಬರೋಬ್ಬರಿ 8 ವಿಕೆಟ್ ಕಬಳಿಸಿದ್ದಾರೆ.
ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಬೆಂಕಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ಮತ್ತು ಬೆಂಗಾಲ್ ತಂಡಗಳು ಮುಖಾಮುಖಿಯಾಗಿವೆ. ಈ ಮ್ಯಾಚ್ನಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಜಮ್ಮು-ಕಾಶ್ಮೀರ ತಂಡವು ಬೆಂಗಾಲ್ ತಂಡವನ್ನು 328 ರನ್ಗಳಿಗೆ ಆಲೌಟ್ ಮಾಡಿದ್ದರು.
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು-ಕಾಶ್ಮೀರ ತಂಡಕ್ಕೆ ಮೊಹಮ್ಮದ್ ಶಮಿ ಆಘಾತದ ಮೇಲೆ ಆಘಾತ ನೀಡಿದರು. ಪರಿಣಾಮ ಮೊದಲ ಇನಿಂಗ್ಸ್ನಲ್ಲಿ ಜಮ್ಮು-ಕಾಶ್ಮೀರ ತಂಡವು 302 ರನ್ಗಳಿಸಿ ಆಲೌಟ್ ಆಗಿದೆ. ಬೆಂಗಾಲ್ ಪರ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಶಮಿ 22.1 ಓವರ್ಗಳಲ್ಲಿ 90 ರನ್ ನೀಡಿ ಬರೋಬ್ಬರಿ 8 ವಿಕೆಟ್ ಕಬಳಿಸಿದ್ದಾರೆ.
ವಿಶೇಷ ಎಂದರೆ ಇದು ಮೊಹಮ್ಮದ್ ಶಮಿ ಅವರ ಫಸ್ಟ್ ಕ್ಲಾಸ್ ಕ್ರಿಕೆಟ್ನ ಬೆಸ್ಟ್ ಬೌಲಿಂಗ್ ಪ್ರದರ್ಶನವಾಗಿದೆ. ಈ ಹಿಂದೆ ಅವರು 79 ರನ್ಗೆ 7 ವಿಕೆಟ್ ಪಡೆದಿದ್ದು ಶ್ರೇಷ್ಠ ಸಾಧನೆಯಾಗಿತ್ತು. ಇದೀಗ 90 ರನ್ಗಳಿಗೆ 8 ವಿಕೆಟ್ ಉರುಳಿಸುವ ಮೂಲಕ ಶಮಿ ಜೀವಮಾನದ ಬೆಸ್ಟ್ ಬೌಲಿಂಗ್ ಪ್ರದರ್ಶಿಸಿದ್ದಾರೆ.
ಈ ಬೌಲಿಂಗ್ ಪ್ರದರ್ಶನದೊಂದಿಗೆ ಮೊಹಮ್ಮದ್ ಶಮಿ ಮತ್ತೊಮ್ಮೆ ಟೀಮ್ ಇಂಡಿಯಾದ ಕದ ತಟ್ಟಿದ್ದಾರೆ. ಅದರಂತೆ ಮುಂಬರುವ ಟೆಸ್ಟ್ ಸರಣಿಯಲ್ಲಿ ಶಮಿಗೆ ಮತ್ತೆ ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

