W,W,W,W,W,W,W,W: ವಿಕೆಟ್ ಮೇಲೆ ವಿಕೆಟ್: ಶಮಿ ಬೆಂಕಿ ಬೌಲಿಂಗ್

Updated on: Feb 17, 2026 | 1:20 PM

Mohammed Shami: ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು-ಕಾಶ್ಮೀರ ತಂಡಕ್ಕೆ ಮೊಹಮ್ಮದ್ ಶಮಿ ಆಘಾತದ ಮೇಲೆ ಆಘಾತ ನೀಡಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಜಮ್ಮು-ಕಾಶ್ಮೀರ ತಂಡವು 302 ರನ್​ಗಳಿಸಿ ಆಲೌಟ್ ಆಗಿದೆ. ಬೆಂಗಾಲ್ ಪರ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಶಮಿ 22.1 ಓವರ್​ಗಳಲ್ಲಿ 90 ರನ್ ನೀಡಿ ಬರೋಬ್ಬರಿ 8 ವಿಕೆಟ್ ಕಬಳಿಸಿದ್ದಾರೆ.

ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಬೆಂಕಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ಮತ್ತು ಬೆಂಗಾಲ್ ತಂಡಗಳು ಮುಖಾಮುಖಿಯಾಗಿವೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಜಮ್ಮು-ಕಾಶ್ಮೀರ ತಂಡವು ಬೆಂಗಾಲ್ ತಂಡವನ್ನು 328 ರನ್​ಗಳಿಗೆ ಆಲೌಟ್ ಮಾಡಿದ್ದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು-ಕಾಶ್ಮೀರ ತಂಡಕ್ಕೆ ಮೊಹಮ್ಮದ್ ಶಮಿ ಆಘಾತದ ಮೇಲೆ ಆಘಾತ ನೀಡಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಜಮ್ಮು-ಕಾಶ್ಮೀರ ತಂಡವು 302 ರನ್​ಗಳಿಸಿ ಆಲೌಟ್ ಆಗಿದೆ. ಬೆಂಗಾಲ್ ಪರ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಶಮಿ 22.1 ಓವರ್​ಗಳಲ್ಲಿ 90 ರನ್ ನೀಡಿ ಬರೋಬ್ಬರಿ 8 ವಿಕೆಟ್ ಕಬಳಿಸಿದ್ದಾರೆ.

ವಿಶೇಷ ಎಂದರೆ ಇದು ಮೊಹಮ್ಮದ್ ಶಮಿ ಅವರ ಫಸ್ಟ್ ಕ್ಲಾಸ್ ಕ್ರಿಕೆಟ್​ನ ಬೆಸ್ಟ್ ಬೌಲಿಂಗ್ ಪ್ರದರ್ಶನವಾಗಿದೆ. ಈ ಹಿಂದೆ ಅವರು 79 ರನ್​ಗೆ 7 ವಿಕೆಟ್ ಪಡೆದಿದ್ದು ಶ್ರೇಷ್ಠ ಸಾಧನೆಯಾಗಿತ್ತು. ಇದೀಗ 90 ರನ್​ಗಳಿಗೆ 8 ವಿಕೆಟ್ ಉರುಳಿಸುವ ಮೂಲಕ ಶಮಿ ಜೀವಮಾನದ ಬೆಸ್ಟ್ ಬೌಲಿಂಗ್ ಪ್ರದರ್ಶಿಸಿದ್ದಾರೆ.

ಈ ಬೌಲಿಂಗ್ ಪ್ರದರ್ಶನದೊಂದಿಗೆ ಮೊಹಮ್ಮದ್ ಶಮಿ ಮತ್ತೊಮ್ಮೆ ಟೀಮ್ ಇಂಡಿಯಾದ ಕದ ತಟ್ಟಿದ್ದಾರೆ. ಅದರಂತೆ ಮುಂಬರುವ ಟೆಸ್ಟ್ ಸರಣಿಯಲ್ಲಿ ಶಮಿಗೆ ಮತ್ತೆ ಚಾನ್ಸ್ ನೀಡಲಿದ್ದಾರಾ ಕಾದು ನೋಡಬೇಕಿದೆ.

 

Loading...
Unable to load recommendations.
Follow Us
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More