3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
Mohammed Shami: ಹೊಡಿಬಡಿ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದ ಶಮಿ 33 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 53 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಬೆಂಗಾಲ್ ತಂಡವು ಮೊದಲ ಇನಿಂಗ್ಸ್ನಲ್ಲಿ ಬರೋಬ್ಬರಿ 629 ರನ್ ಕಲೆಹಾಕಿದೆ. ಇದೀಗ ದ್ವಿತೀಯ ಇನಿಂಗ್ಸ್ ಶುರು ಮಾಡಿರುವ ಆಂಧ್ರ ತಂಡವು 30 ಓವರ್ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 83 ರನ್ ಕಲೆಹಾಕಿದೆ.
ರಣಜಿ ಟೂರ್ನಿಯ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಸ್ಫೋಟಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯುತ್ತಿರುವ ಆಂಧ್ರ ಪ್ರದೇಶ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಾಲ್ ತಂಡದ ನಾಯಕ ಅಭಿಮನ್ಯು ಈಶ್ವರನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಂಧ್ರ ತಂಡವು ಪ್ರಥಮ ಇನಿಂಗ್ಸ್ನಲ್ಲಿ 295 ರನ್ಗಳಿಸಿ ಆಲೌಟ್ ಆಯಿತು.
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಬೆಂಗಾಲ್ ಪರ ಸುದೀಪ್ ಕುಮಾರ್ ದ್ವಿಶತಕ ಸಿಡಿಸಿದರು. ಇನ್ನು ಸುಮಂತ ಗುಪ್ತಾ 81 ರನ್ ಬಾರಿಸಿದರೆ, ಶಕೀರ್ ಹಬೀಬಿ 95 ರನ್ಗಳ ಇನಿಂಗ್ಸ್ ಆಡಿದರು. ಹಾಗೆಯೇ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮೊಹಮ್ಮದ್ ಶಮಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
ಹೊಡಿಬಡಿ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದ ಶಮಿ 33 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 53 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಬೆಂಗಾಲ್ ತಂಡವು ಮೊದಲ ಇನಿಂಗ್ಸ್ನಲ್ಲಿ ಬರೋಬ್ಬರಿ 629 ರನ್ ಕಲೆಹಾಕಿದೆ. ಇದೀಗ ದ್ವಿತೀಯ ಇನಿಂಗ್ಸ್ ಶುರು ಮಾಡಿರುವ ಆಂಧ್ರ ತಂಡವು 30 ಓವರ್ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 83 ರನ್ ಕಲೆಹಾಕಿದೆ.
ಇತ್ತ ಐದನೇ ದಿನದಾಟ ಚಾಲ್ತಿಯಲ್ಲಿರುವ ಕಾರಣ ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವ ಅಥವಾ ಬೆಂಗಾಲ್ ತಂಡ ಗೆಲ್ಲುವ ಸಾಧ್ಯತೆ ಹೆಚ್ಚು. ಹೀಗಾಗಿ 3ನೇ ಕ್ವಾರ್ಟರ್ ಫೈನಲ್ ಮೂಲಕ ಬೆಂಗಾಲ್ ತಂಡವು ಸೆಮಿಫೈನಲ್ಗೆ ಅರ್ಹತೆ ಪಡೆಯುವುದನ್ನು ನಿರೀಕ್ಷಿಸಬಹುದು.
Published on: Feb 10, 2026 09:54 AM
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ

