SMAT 2024: ಶಮಿ ಸಿಡಿಲಬ್ಬರದ ಬ್ಯಾಟಿಂಗ್; ಬಂಗಾಳ ತಂಡಕ್ಕೆ ರೋಚಕ ಜಯ! ವಿಡಿಯೋ ನೋಡಿ
Mohammed Shami: ಸೈಯದ್ ಮುಷ್ಟಾಕ್ ಅಲಿ ಟ್ರೋಫಿಯಲ್ಲಿ ಬಂಗಾಳ ಪರ ಆಡುತ್ತಿರುವ ಮೊಹಮ್ಮದ್ ಶಮಿ ಅವರು ಚಂಡೀಗಢ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 17 ಎಸೆತಗಳಲ್ಲಿ 32 ರನ್ ಗಳಿಸಿದ ಅವರು ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದರು. ಬೌಲಿಂಗ್‌ನಲ್ಲಿ 1 ವಿಕೆಟ್ ಪಡೆದರೂ, ಅವರ ಬ್ಯಾಟಿಂಗ್ ಅದ್ಭುತವಾಗಿತ್ತು.
ಇಷ್ಟರಲ್ಲೇ ಆಸ್ಟ್ರೇಲಿಯಾಕ್ಕೆ ಹಾರುವ ತವಕದಲ್ಲಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ, ಕಾಂಗರೂಗಳ ನಾಡಲ್ಲಿ ಟೀಂ ಇಂಡಿಯಾವನ್ನು ಕೂಡಿಕೊಳ್ಳುವ ಮುನ್ನವೇ ದೇಶೀ ಕ್ರಿಕೆಟ್ನಲ್ಲಿ ಸುನಾಮಿ ಎಬ್ಬಿಸಿದ್ದಾರೆ. ಪ್ರಸ್ತುತ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಬಂಗಾಳ ಪರ ಕಣಕ್ಕಿಳಿಯುತ್ತಿರುವ ಶಮಿ ತಮ್ಮ ಅಬ್ಬರದ ಬ್ಯಾಟಿಂಗ್ ಮೂಲಕ ಚಂಡೀಗಢ ತಂಡದ ಬೌಲರ್ಗಳ ಬೆವರಿಳಿಸಿದ್ದಾರೆ. ಈ ಪಂದ್ಯದಲ್ಲಿ ಶಮಿಗೆ ಬೌಲಿಂಗ್‌ನಲ್ಲಿ ಅದ್ಭುತಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆದರೆ ಅವರು ತಮ್ಮ ತಂಡದ ಪರ ಅದ್ಭುತ ಬ್ಯಾಟಿಂಗ್ ನಡೆಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಶಮಿಯ ಸ್ಫೋಟಕ ಬ್ಯಾಟಿಂಗ್
ಈ ಪಂದ್ಯದಲ್ಲಿ 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಮೊಹಮ್ಮದ್ ಶಮಿ ಚಂಡೀಗಢ ವಿರುದ್ಧ ಬಿರುಸಿನ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಬಂಗಾಳದ ಯಾವುದೇ ಪ್ರಮುಖ ಬ್ಯಾಟ್ಸ್‌ಮನ್‌ಗಳು ದೊಡ್ಡ ಇನ್ನಿಂಗ್ಸ್ ಆಡಲಾಗಲಿಲ್ಲ. ಆದರೆ ಶಮಿ ತಮ್ಮ ಬ್ಯಾಟಿಂಗ್‌ನಿಂದ ಅದ್ಭುತಗಳನ್ನು ಮಾಡಿದರು. ಈ ಪಂದ್ಯದಲ್ಲಿ ಶಮಿ 17 ಎಸೆತಗಳಲ್ಲಿ 32 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದ್ದರು. ಈ ವೇಳೆ ಅವರು 188.23 ರ ಸ್ಟ್ರೈಕ್ ರೇಟ್ನಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳನ್ನು ಬಾರಿಸಿದರು. ಶಮಿಯವರ ಈ ಇನ್ನಿಂಗ್ಸ್ ಬಂಗಾಳದ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿತು. ಆದಾಗ್ಯೂ ಈ ಪಂದ್ಯದಲ್ಲಿ ಶಮಿ ತಮ್ಮ ಬೌಲಿಂಗ್‌ನಿಂದ ಹೆಚ್ಚು ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಅವರು ತಮ್ಮ 4 ಓವರ್ ಸ್ಪೆಲ್‌ನಲ್ಲಿ 25 ರನ್ ವ್ಯಯಿಸಿ 1 ವಿಕೆಟ್ ಪಡೆದರು.
ಪಂದ್ಯ ಹೀಗಿತ್ತು
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಂಗಾಳ 9 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಚಂಡೀಗಢ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 156 ರನ್ ಕಲೆಹಾಕಲಷ್ಟೇ ಶಕ್ತವಾಗಿ 3 ರನ್‌ಗಳಿಂದ ಪಂದ್ಯವನ್ನು ಕಳೆದುಕೊಂಡಿತು.
ಶಮಿ ಅವರ ಇತ್ತೀಚಿನ ಪ್ರದರ್ಶನ
ಒಂದು ವರ್ಷ ಕ್ರಿಕೆಟ್‌ನಿಂದ ದೂರವಿದ್ದ ಶಮಿ ಇದೀಗ ದೇಶೀ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದುವರೆಗೆ ಆಡಿದ 8 ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ. ಇದಕ್ಕೂ ಮುನ್ನ ರಣಜಿ ಟ್ರೋಫಿಯಲ್ಲಿ ಮಧ್ಯಪ್ರದೇಶ ವಿರುದ್ಧ 7 ವಿಕೆಟ್ ಪಡೆದಿದ್ದರು. ಸದ್ಯ ಅವರು ಭಾರತ ತಂಡಕ್ಕೆ ಮರಳುವ ಭರವಸೆಯಲ್ಲಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ