14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
Mohammed Shami: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡಕ್ಕೆ ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇದರ ಜೊತೆ ಪ್ರಮುಖ ವೇಗಿಯಾಗಿ ಮೊಹಮ್ಮದ್ ಶಮಿ ಅವರನ್ನು ಸಹ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಗಾಗಿ ಟೀಮ್ ಇಂಡಿಯಾ ಅಭ್ಯಾಸ ಶುರು ಮಾಡಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಅಭ್ಯಾಸ ಶುರು ಮಾಡಿದೆ. ಈ ಅಭ್ಯಾಸದೊಂದಿಗೆ ಭಾರತ ತಂಡಕ್ಕೆ ಮೊಹಮ್ಮದ್ ಶಮಿ ಅವರ ಪುನರಾಗಮನವಾಗಿದೆ.
2023ರ ಏಕದಿನ ವಿಶ್ವಕಪ್ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಸಂಪೂರ್ಣ ಫಿಟ್ನೆಸ್ನೊಂದಿಗೆ ತಂಡಕ್ಕೆ ಮರಳಿದ್ದಾರೆ. ಈ ಮೂಲಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಈ ಅಭ್ಯಾಸದ ವಿಡಿಯೋವನ್ನು ಬಿಸಿಸಿಐ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಆರಂಭವಾಗಲಿದೆ. ಈ ಸರಣಿಗೆ ಮೊದಲಿಗೆ 5 ಪಂದ್ಯಗಳ ಟಿ20 ಪಂದ್ಯಗಳನ್ನು ಆಡಲಾಗುತ್ತಿದ್ದು, ಇದಾದ ಬಳಿಕ ಮೂರು ಮ್ಯಾಚ್ಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.
- 1ನೇ T20I: ಜನವರಿ 22 (ಚೆನ್ನೈ)
- 2ನೇ T20I: ಜನವರಿ 25 (ಕೋಲ್ಕತ್ತಾ)
- 3ನೇ T20I: ಜನವರಿ 28 (ರಾಜ್‌ಕೋಟ್)
- 4ನೇ T20I: ಜನವರಿ 31 (ಪುಣೆ)
- 5ನೇ T20I: ಫೆಬ್ರವರಿ 2 (ಮುಂಬೈ)