DSP ಸಿರಾಜ್​ಗೆ ಹೈದರಾಬಾದ್‌ನಲ್ಲಿ ಅದ್ಧೂರಿ ಸ್ವಾಗತ; ವಿಡಿಯೋ ನೋಡಿ

Updated on: Aug 06, 2025 | 4:31 PM

Mohammed Siraj's Hero's Welcome: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 23 ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ ಅವರಿಗೆ ಹೈದರಾಬಾದ್‌ನಲ್ಲಿ ಭವ್ಯ ಸ್ವಾಗತ ದೊರೆಯಿತು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ದಂಡೇ ಅವರನ್ನು ಸ್ವಾಗತಿಸಿತು. ಸಿರಾಜ್ ತಮ್ಮ ಅದ್ಭುತ ಪ್ರದರ್ಶನಕ್ಕಾಗಿ ವ್ಯಾಪಕ ಮೆಚ್ಚುಗೆ ಗಳಿಸಿದ್ದಾರೆ. ಈ ಸ್ವಾಗತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ, ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಗಮನಾರ್ಹ ಪ್ರದರ್ಶನ ನೀಡಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದರು. ಆಡಿದ ಐದು ಪಂದ್ಯಗಳಲ್ಲಿ ಒಟ್ಟು 23 ವಿಕೆಟ್‌ಗಳನ್ನು ಕಬಳಿಸಿದ ಸಿರಾಜ್, ಇದೀಗ ಇಂಗ್ಲೆಂಡ್‌ ಪ್ರವಾಸವನ್ನು ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಟೀಂ ಇಂಡಿಯಾವನ್ನು ಸೋಲಿನಿಂದ ಪಾರು ಮಾಡಿದ ಡಿಎಸ್​​ಪಿ ಮೊಹಮ್ಮದ್ ಸಿರಾಜ್​ಗೆ ಹೈದರಾಬಾದ್‌ನಲ್ಲಿ ಭವ್ಯ ಸ್ವಾಗತ ನೀಡಲಾಯಿತು, ಅದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಎಲ್ಲಾ ಅಭಿಮಾನಿಗಳು ಅವರಿಗೆ ಹುರಿದುಂಬಿಸುತ್ತಿರುವುದು ಕಂಡುಬಂದಿದೆ.

ಡಿಎಸ್ಪಿ ಸಿರಾಜ್​ಗೆ ಭವ್ಯ ಸ್ವಾಗತ

ಮೊಹಮ್ಮದ್ ಸಿರಾಜ್ ಹೈದರಾಬಾದ್ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಅವರ ಅನೇಕ ಅಭಿಮಾನಿಗಳು ಸೆಲ್ಫಿ ಮತ್ತು ಆಟೋಗ್ರಾಫ್ ತೆಗೆದುಕೊಳ್ಳಲು ಅಲ್ಲಿ ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಅಭಿಮಾನಿಗಳು ಮೊಹಮ್ಮದ್ ಸಿರಾಜ್‌ಗೆ ಹುರಿದುಂಬಿಸುತ್ತಿರುವುದು ಕಂಡುಬಂದಿದೆ. ಈ ವೀಡಿಯೊದಲ್ಲಿ ಮೊಹಮ್ಮದ್ ಸಿರಾಜ್ ಕಪ್ಪು ಜಾಕೆಟ್, ಹಾಗೂ ಕನ್ನಡಕ ಧರಿಸಿದ್ದಾರೆ. ಇದು ಮಾತ್ರವಲ್ಲದೆ, ಅವರು ಫೋನ್‌ನಲ್ಲಿ ಯಾರೊಂದಿಗೋ ಮಾತನಾಡುತ್ತಿರುವುದು ಕಂಡುಬಂದಿದೆ. ಅಲ್ಲದೆ ಸಿರಾಜ್ ಸುರಕ್ಷತೆಗಾಗಿ ಬಾಡಿಗಾರ್ಡ್​ಗಳು ಇರುವುದನ್ನು ಕಾಣಬಹುದು. ಹೈದರಾಬಾದ್ ವಿಮಾನ ನಿಲ್ದಾಣದಿಂದ ಹೊರಬಂದ ಅವರು ತಮ್ಮ ರೇಂಜ್ ರೋವರ್ ವೋಗ್ ಕಾರಿನಲ್ಲಿ ಕುಳಿತು ಮನೆಗೆ ಪ್ರಯಾಣ ಬೆಳೆಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 06, 2025 04:31 PM