VIDEO: ಗುಜರಾತ್ ಟೈಟಾನ್ಸ್ ತಂಡಕ್ಕೆ ಸ್ಕೂಟರ್ನಲ್ಲಿ ಸಿರಾಜ್ ಎಂಟ್ರಿ
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ವೇಗಿ ಮೊಹಮ್ಮದ್ ಸಿರಾಜ್ ಈ ಬಾರಿಯ ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. ಇದೀಗ ಐಪಿಎಲ್ ಸಿದ್ಧತೆ ಆರಂಭಿಸಿರುವ ಗುಜರಾತ್ ಟೈಟಾನ್ಸ್ ತಂಡವನ್ನು ಸಿರಾಜ್ ಕೂಡಿಕೊಂಡಿದ್ದಾರೆ.
ಈ ಬಾರಿಯ ಮೆಗಾ ಹರಾಜಿನ ಮೂಲಕ ಸಿರಾಜ್ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ಬರೋಬ್ಬರಿ 12.25 ಕೋಟಿ ರೂ. ನೀಡಿ ಖರೀದಿಸಿದೆ. ಇದೀಗ ಅಹಮದಾಬಾದ್ನಲ್ಲಿ ನಡೆಯುತ್ತಿರುವ ಅಭ್ಯಾಸ ಶಿಬಿರದಲ್ಲಿ ಸಿರಾಜ್ ಕೂಡ ಕಾಣಿಸಿಕೊಂಡಿದ್ದಾರೆ.
ಈ ಶಿಬಿರಕ್ಕೆ ಸಿರಾಜ್ ಸ್ಕೂಟರ್ನಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ಗುಜರಾತ್ ಟೈಟಾನ್ಸ್ ತಂಡವು ತನ್ನ ಮೊದಲ ಪಂದ್ಯವನ್ನು ಮಾರ್ಚ್ 25 ರಂದು ಆಡಲಿದ್ದು, ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 23 ರಂದು ನಡೆಯಲಿರುವ 3ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಕಣಕ್ಕಿಳಿಯಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.