ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

Updated on: Dec 22, 2025 | 9:53 AM

ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದ್ದು, ಅದು ಸತ್ಯವಾಗಿರುವುದರಿಂದ ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಭಾನುವಾರ ಹೇಳಿದ್ದಾರೆ. ಜನರು ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಅವರ ಪೂರ್ವಜರ ವೈಭವವನ್ನು ಆಚರಿಸುವವರೆಗೆ ದೇಶವು ಹಿಂದೂ ರಾಷ್ಟ್ರವಾಗಿ ಉಳಿಯುತ್ತದೆ ಎಂದು ಅವರು ಒತ್ತಿ ಹೇಳಿದರು.

ಮುಂಬೈ, ಡಿಸೆಂಬರ್ 22: ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದ್ದು, ಅದು ಸತ್ಯವಾಗಿರುವುದರಿಂದ ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಭಾನುವಾರ ಹೇಳಿದ್ದಾರೆ. ಜನರು ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಅವರ ಪೂರ್ವಜರ ವೈಭವವನ್ನು ಆಚರಿಸುವವರೆಗೆ ದೇಶವು ಹಿಂದೂ ರಾಷ್ಟ್ರವಾಗಿ ಉಳಿಯುತ್ತದೆ ಎಂದು ಅವರು ಒತ್ತಿ ಹೇಳಿದರು.

ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ, ಆದರೆ ಇದು ಎಂದಿನಿಂದ ನಡೆದುಕೊಂಡು ಬಂದಿದೆ ಎಂಬುದು ಯಾರಿಗಾದರೂ ತಿಳಿದಿದೆಯೇ? ಹಾಗಾದರೆ, ಅದಕ್ಕೆ ನಮಗೆ ಸಾಂವಿಧಾನಿಕ ಅನುಮೋದನೆ ಬೇಕೇ? ಹಿಂದೂಸ್ತಾನ ಒಂದು ಹಿಂದೂ ರಾಷ್ಟ್ರ. ಭಾರತವನ್ನು ತಮ್ಮ ಮಾತೃಭೂಮಿ ಎಂದು ಪರಿಗಣಿಸುವ ವ್ಯಕ್ತಿಗಳು ಭಾರತೀಯ ಸಂಸ್ಕೃತಿಯನ್ನು ಗೌರವಿಸುತ್ತಾರೆ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

ಹಿಂದುತ್ವದ ಸಿದ್ಧಾಂತದಲ್ಲಿ ಕಟ್ಟುನಿಟ್ಟಾಗಿ ನಂಬಿಕೆ ಇಡುವ ಆರ್‌ಎಸ್‌ಎಸ್, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಂಸತ್ತು ಕಾನೂನನ್ನು ತಿದ್ದುಪಡಿ ಮಾಡುತ್ತದೆಯೇ ಎಂಬುದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.ಆರ್‌ಎಸ್‌ಎಸ್ ಯಾವುದೇ ಮುಸ್ಲಿಂ ವಿರೋಧಿ ಭಾವನೆಯನ್ನು ಹೊಂದಿರುವ ಸಂಘಟನೆಯಲ್ಲ ಎಂದು ಅವರು ಹೇಳಿದರು. ಆರ್‌ಎಸ್‌ಎಸ್ ಯಾವಾಗಲೂ ಪಾರದರ್ಶಕತೆಯಿಂದ ಕೆಲಸ ಮಾಡಿದೆ ಎಂದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ