AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ನಿರ್ಮೂಲನೆ, ಬೆಂಗಳೂರು ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ

ಭ್ರಷ್ಟಾಚಾರ ನಿರ್ಮೂಲನೆ, ಬೆಂಗಳೂರು ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ

Shivaraj
| Edited By: |

Updated on:Jun 16, 2026 | 12:50 PM

Share

ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಭ್ರಷ್ಟಾಚಾರ ರಹಿತ ಆಡಳಿತ ನೀಡುವಂತೆ ಕರೆ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಆದ್ಯತೆ ನೀಡಿ, ಯೋಜನೆಗಳನ್ನು ಜಾರಿಗೆ ತರುವಂತೆ ಸಲಹೆ ನೀಡಿರುವ ಅವರು, ಎಸ್.ಎಂ. ಕೃಷ್ಣ ಅವರಂತೆ ದಕ್ಷ ಆಡಳಿತ ನಡೆಸಿ, ಬೆಂಗಳೂರನ್ನು ಮತ್ತೊಮ್ಮೆ ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಲು ಶ್ರಮಿಸುವಂತೆ ಒತ್ತಾಯಿಸಿದ್ದಾರೆ. ಬಿಬಿಎಂಪಿ ಚುನಾವಣೆ ಮತ್ತು ಇವಿಎಂ ಬಳಕೆಯ ಬಗ್ಗೆಯೂ ಪೈ ಮಾತನಾಡಿದ್ದಾರೆ.

ಬೆಂಗಳೂರು, ಜೂನ್​​ 16:  ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡುವಂತೆ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ವಿಶೇಷ ಗಮನ ಹರಿಸುವಂತೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಸಲಹೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರು ತಮ್ಮ ಮಾರ್ಗದರ್ಶಕರಾದ ಎಸ್.ಎಂ. ಕೃಷ್ಣ ಅವರಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಕೆಲಸ ಮಾಡಿ ಬೆಂಗಳೂರಿನ ಹೆಸರನ್ನು ವಿಶ್ವ ಮಟ್ಟದಲ್ಲಿ ಮತ್ತೊಮ್ಮೆ ಎತ್ತಿ ಹಿಡಿಯಬೇಕು ಎಂದವರು ಆಶಿಸಿದ್ದಾರೆ. ಭ್ರಷ್ಟಾಚಾರದಿಂದಾಗಿ ನಗರದ ರಸ್ತೆಗಳು ಹಾಳಾಗಿವೆ, ಫುಟ್‌ಪಾತ್‌ಗಳಿಲ್ಲ, ದುಡ್ಡು ತಿನ್ನುವ ಕೆಲಸ ನಡೆಯುತ್ತಿದೆ ಎಂದು ಪೈ ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 16, 2026 12:40 PM

Follow Us
Shivaraj
Shivaraj