ಮೂರು ತಿಂಗಳು ದೂರ ಇದ್ದ ಅಕ್ಕನ ಗುರುತಿಸಲೇ ಇಲ್ಲ ತಮ್ಮ; ಮೋಕ್ಷಿತಾ ಕಣ್ಣೀರಿಗೆ ಕರುಳು ಕಿವುಚುತ್ತೆ

Updated on: Jan 01, 2025 | 8:18 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೋಕ್ಷಿತಾ ಅವರು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಅವರ ಆಟ ಅನೇಕರಿಗೆ ಇಷ್ಟ ಆಗುತ್ತಿದೆ. ಈಗ ಅವರ ಮನೆಯವರು ದೊಡ್ಮನೆಗೆ ಬಂದಿದ್ದಾರೆ. ಈ ವೇಳೆ ಮೋಕ್ಷಿತಾ ಅವರ ಭಾವನಾತ್ಮಕ ಕ್ಷಣ ಕರುಳು ಕಿವುಚಿದೆ. ಆ ಪ್ರೋಮೋ ವೈರಲ್ ಆಗಿದೆ.

ಮೋಕ್ಷಿತಾ ಅವರ ತಮ್ಮ ವಿಶೇಷ ಚೇತನ. ಅವರಿಗೆ ಹೊರ ಪ್ರಪಂಚದ ಜ್ಞಾನ ಪರಿಪೂರ್ಣವಾಗಿ ಇಲ್ಲ. ಮೋಕ್ಷಿತಾ ಅವರು ತಮ್ಮನ ಅಷ್ಟು ದಿನ ಬಿಟ್ಟಿದ್ದೇ ಇಲ್ಲ. ಆದರೆ, ಬಿಗ್ ಬಾಸ್​ಗಾಗಿ ಅವರು ಕುಟುಂಬವನ್ನು ಮೂರು ತಿಂಗಳು ಬಿಟ್ಟಿದ್ದರು. ಈ ಕಾರಣಕ್ಕೆ ಮೋಕ್ಷಿತಾ ಅವರನ್ನು ತಮ್ಮ ಮರೆತೇಬಿಟ್ಟಿದ್ದಾರೆ. ಈ ದೃಶ್ಯ ನೋಡುಗರ ಕರುಳನ್ನು ಕಿವುಚಿದೆ. ಗೌತಮಿ ಈ ದೃಶ್ಯವನ್ನು ನೋಡಿ ಕಣ್ಣೀರು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More