ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ

Updated on: Feb 10, 2026 | 1:16 PM

ಮೋಕ್ಷಿತಾ ಪೈ ಅವರು ಸದ್ಯ ಸುದ್ದಿಯಲ್ಲಿರುವ ನಟಿ. ಅವರು ಕಲರ್ಸ್ ಕನ್ನಡದ ಬಿಗ್ ಬಾಸ್​ ಶೋನಲ್ಲಿ ಸ್ಪರ್ಧಿಯಾಗಿದ್ದರು. ಈಗ ಮೋಕ್ಷಿತಾ ಪೈ ಅವರು ಹೊಸ ಧಾರಾವಾಹಿಗೆ ನಾಯಕಿ ಆಗುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹರಿದಾಡಿದೆ. ಈ ವಿಷಯ ಕುತೂಹಲ ಮೂಡಿಸಿದೆ.

ಮೋಕ್ಷಿತಾ ಪೈ ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಈ ಬಾರಿ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ತೆರಳಿದ್ದರು. ಈಗ ಅವರಿಗೆ ಜೀ ಕನ್ನಡ ವಾಹಿನಿಯಿಂದ ಆಫರ್ ಸಿಕ್ಕಿದೆ. ‘ಜಗದ್ಧಾತ್ರಿ’ ಹೆಸರಿನ ಹೊಸ ಧಾರಾವಾಹಿ ಶೀಘ್ರವೇ ಪ್ರಸಾರ ಕಾಣಲಿದೆ. ಈ ಧಾರಾವಾಹಿಗೆ ಮೋಕ್ಷಿತಾ ಪೈ ನಾಯಕಿ ಎಂದು ವರದಿ ಆಗಿದೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More