AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಶಾಸಕ ಎನ್​.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಶಾಸಕ ಎನ್​.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ

ಬಸವರಾಜ ಮುದನೂರ್
| Edited By: |

Updated on: Aug 16, 2026 | 12:54 PM

Share

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್​.ವೈ. ಗೋಪಾಲಕೃಷ್ಣ ಅವರು ತಮ್ಮ ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಅಥವಾ ಪಕ್ಕದ ಚಳ್ಳಕೆರೆ ಕ್ಷೇತ್ರಕ್ಕೆ ಸೇರಿಸುವ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮೊಳಕಾಲ್ಮೂರು ಕ್ಷೇತ್ರವು ಅಭಿವೃದ್ಧಿಗೆ ಅವಕಾಶವಿಲ್ಲದಂತಾಗಿದೆ ಎಂಬ ನೋವು ಮತ್ತು ಹತಾಶೆಯಿಂದ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗ, ಆಗಸ್ಟ್​​ 16: ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಲಿ ಎಂದು ಕಾಂಗ್ರೆಸ್​​ ಶಾಸಕ ಎನ್.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಂಬೇಡ್ಕರ್ ಭವನ ಸ್ಥಳ ಪರಿಶೀಲನೆ ವೇಳೆ ಅವರು ನೀಡಿದ್ದ ಹೇಳಿಕೆ ವೈರಲ್ ಆಗಿದ್ದು, ಆಂಧ್ರಪ್ರದೇಶಕ್ಕೆ ಸೇರಿಸಲಾಗದಿದ್ದರೆ ಚಳ್ಳಕೆರೆ ಕ್ಷೇತ್ರಕ್ಕಾದರೂ ಸೇರಿಸಲಿ ಎಂದವರು ಆಗ್ರಹಿಸಿದ್ದಾರೆ. ಮೊಳಕಾಲ್ಮೂರು ಯಾವುದೋ ಒಂದು ಮೂಲೆಯಲ್ಲಿದ್ದು, ದೊಡ್ಡ ದೊಡ್ಡವರಿಗೆ ಕ್ಷೇತ್ರ ಇರುವುದೇ ಕಾಣುವುದಿಲ್ಲ. ಇಲ್ಲಿನ ಶಾಸಕರಿಗೆ ಗೌರವವೇ ಇರೋದಿಲ್ಲ. ಮೊಳಕಾಲ್ಮೂರು ಹಣೆಬರಹ ಎಲ್ಲಿತ್ತೋ ಅಲ್ಲೇ ಇದೆ ಎಂದವರು ಬೇಸರವನ್ನೂ ಹೊರಹಾಕಿದ್ದಾರೆ. ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡೋಣ. ನೂತನ ಸಚಿವರಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿರುವೆ ಎಂದವರು ಹೇಳಿರುವ ವಿಡಿಯೋ ವೈರಲ್​​ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬಸವರಾಜ ಮುದನೂರ್
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More