Mysuru: ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಆಗಸ್ಟ್ 17 ಅಥವಾ 18 ರಿಂದ ಹಣ ಜಮೆಯಾಗುತ್ತದೆ: ಲಕ್ಷ್ಮಿ ಹೆಬ್ಬಾಳ್ಕರ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 24, 2023 | 2:48 PM

ಜುಲೈ 26 ಬುಧವಾರದಂದು ಕ್ಯಾಬಿನೆಟ್ ಮೀಟಿಂಗ್ ನಡೆದ ಬಳಿಕ ಅರ್ಜಿ ಅಪ್ಲೋಡ್ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೆಬ್ಬಾಳ್ಕರ್ ಹೇಳಿದರು.

ಮೈಸೂರು: ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಸ್ಟ್ 17 ಅಥವಾ 18 ರಿಂದ ಗೃಹಲಕ್ಷ್ಮಿ ಯೋಜನೆ (Gruha Lakshmi) ಅಡಿ ಅರ್ಹ ಫಲಾನುಭವಿಗಳ ಖಾತೆ ಹಣ ಜಮೆಯಾಗಲಿದೆ ಎಂದು ಹೇಳಿದರು. ಯೋಜನೆಗೆ ಸಂಬಂಧಿಸಿದ ಌಪ್ ಈಗಾಗಲೇ ತಯಾರಾಗಿದೆ ಮತ್ತು ಜುಲೈ 26 ಬುಧವಾರದಂದು ಕ್ಯಾಬಿನೆಟ್ ಮೀಟಿಂಗ್ ನಡೆದ ಬಳಿಕ ಅರ್ಜಿ ಅಪ್ಲೋಡ್ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೆಬ್ಬಾಳ್ಕರ್ ಹೇಳಿದರು. ಗೃಹಲಕ್ಷ್ಮಿ ಯೋಜನೆಯಲ್ಲಿ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ (Aadhaar Card) ಲಿಂಕ್ ಮಾಡಬೇಕಿರುವುದರಿಂದ, ಅವರು ತೆರಿಗೆ ಪಾವತಿದಾರರೇ ಅಲ್ಲವೇ ಅನ್ನೋದು ಗೊತ್ತಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.