ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
Kolar News: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳು ರಾಜಾರೋಷವಾಗಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರ್ಕಾರಿ ದಾಖಲೆಗಳ ಸುರಕ್ಷತೆ ಬಗ್ಗೆ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ವೈರಲ್ ವಿಡಿಯೋ ಸಹಿತ ಮಾಹಿತಿ ಇಲ್ಲಿದೆ.
ಕೋಲಾರ, ಜುಲೈ 21: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳು ನಿರ್ಬಂಧವಿಲ್ಲದೆ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಪ್ರಮುಖ ಸರ್ಕಾರಿ ಕಂದಾಯ ದಾಖಲೆಗಳನ್ನು ಸಂರಕ್ಷಿಸಬೇಕಾದ ಕೊಠಡಿಯಲ್ಲೇ ಈ ರೀತಿಯ ಅವ್ಯವಸ್ಥೆ ಕಂಡುಬಂದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಜಿಲ್ಲೆಯ ಹಲವು ಭಾಗಗಳಲ್ಲಿ ನಕಲಿ ದಾಖಲೆಗಳ ಮೂಲಕ ಭೂಮಿ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಸಂದರ್ಭದಲ್ಲೇ ದಾಖಲೆಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಾಲ್ಲೂಕು ಕಚೇರಿ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಕ್ರಮ ಕೈಗೊಂಡು, ದಾಖಲೆಗಳ ಭದ್ರತೆ ಖಚಿತಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ

