AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ವರ್ಷದ ನಂತರ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!

16 ವರ್ಷದ ನಂತರ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ…!

ರಮೇಶ್ ಬಿ. ಜವಳಗೇರಾ
|

Updated on: May 24, 2025 | 2:48 PM

Share

Monsoon Rain: ಈ ಬಾರಿ ಬಹಳ ಬೇಗನೇ ಮುಂಗಾರು ಎಂಟ್ರಿ ಕೊಟ್ಟಿದೆ. ಪ್ರತಿ ವರ್ಷ ಸಾಮಾನ್ಯವಾಗಿ ಜೂನ್ 1ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ ಆಗುತ್ತದೆ. ಆದರೆ ಈ ಬಾರಿ ಕಳೆದ 16 ವರ್ಷಗಳಲ್ಲೇ ಮುಂಚಿತವಾಗಿ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 2009ರಲ್ಲಿ ಮೇ 23ರಂದೇ ಕೇರಳಕ್ಕೆ ಮಾನ್ಸೂನ್ ಎಂಟ್ರಿ ಕೊಟ್ಟಿತ್ತು. ಈ ವರ್ಷ ಮೇ 24ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಿದ್ದು, ಕರ್ನಾಟಕದಲ್ಲೂ ಸಹ ಹಲವೆಡೆ ಭಾರೀ ಮಳೆಯಾಗುತ್ತಿದೆ.

ಬೆಂಗಳೂರು, (ಮೇ 24): ಈ ಬಾರಿ ಬಹಳ ಬೇಗನೇ ಮುಂಗಾರು ಮಾರುತಗಳು (Monsoon Rain) ಎಂಟ್ರಿ ಕೊಟ್ಟಿವೆ. ಪ್ರತಿ ವರ್ಷ ಸಾಮಾನ್ಯವಾಗಿ ಜೂನ್ 1ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ ಆಗುತ್ತದೆ. ಆದರೆ ಈ ಬಾರಿ ಕಳೆದ 16 ವರ್ಷಗಳಲ್ಲೇ ಮುಂಚಿತವಾಗಿ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 2009ರಲ್ಲಿ ಮೇ 23ರಂದೇ ಕೇರಳಕ್ಕೆ ಮಾನ್ಸೂನ್ ಎಂಟ್ರಿ ಕೊಟ್ಟಿತ್ತು. ಈ ವರ್ಷ ಮೇ 24ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಿದ್ದು, ಕರ್ನಾಟಕದಲ್ಲೂ ಸಹ ಹಲವೆಡೆ ಭಾರೀ ಮಳೆಯಾಗುತ್ತಿದೆ.

ಇನ್ನು ಕರ್ನಾಟಕಕ್ಕೆ ಎರಡ್ಮೂರು ದಿನದಲ್ಲಿ ಮುಂಗಾರು ಮಳೆ ಎಂಟ್ರಿ ಕೊಡುವ ಸಾಧ್ಯತೆ ಇದೆ. ಮೇ 27 ಅಥವಾ ಮೇ 28ರ ವೇಳೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಕೇರಳದ ಬಳಿಕ ಜೂನ್‌ ಮೊದಲ ವಾರದಲ್ಲಿ ಮುಂಗಾರು ಮಾರುತ ರಾಜ್ಯವನ್ನು ಪ್ರವೇಶಿಸುವ ವಾಡಿಕೆ ಇದೆ. ಆದರೆ ಈ ಬಾರಿ 3-4 ದಿನಗಳು ಮುಂಚಿತವಾಗಿ ಮುಂಗಾರು ಆಗಮಿಸುವ ಮುನ್ಸೂಚನೆಯನ್ನು ರಾಜ್ಯ ಹವಮಾನ ಇಲಾಖೆ ನೀಡಿದೆ.