AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಾರು ಮಳೆ ಕೊರತೆ: ಭರಚುಕ್ಕಿ ಜಲಪಾತ ಭಣಭಣ, ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖ

ಮುಂಗಾರು ಮಳೆ ಕೊರತೆ: ಭರಚುಕ್ಕಿ ಜಲಪಾತ ಭಣಭಣ, ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 26, 2026 | 12:15 PM

Share

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಚಾಮರಾಜನಗರದ ವಿಶ್ವವಿಖ್ಯಾತ ಭರಚುಕ್ಕಿ ಜಲಪಾತ ಭಣಗುಡುತ್ತಿದೆ. ಜುಲೈ ತಿಂಗಳಲ್ಲಿ ಎಂದಿನಂತೆ ತುಂಬಿ ಹರಿಯಬೇಕಿದ್ದ ಜಲಪಾತ ಈಗ ಬರಿದಾಗಿದ್ದು, ಬಂಡೆಗಳು ಮಾತ್ರ ಕಾಣುತ್ತಿವೆ. ಮಳೆ ಕೊರತೆಯಿಂದ ಕಾವೇರಿ ಕೊಳ್ಳ ಬತ್ತಿ, ಕೆ.ಆರ್.ಎಸ್. ಡ್ಯಾಂನಲ್ಲಿ ನೀರಿಲ್ಲದೆ ಜಲಪಾತ ಜೀವಕಳೆ ಕಳೆದುಕೊಂಡಿರುವ ಕಾತಣ ಪ್ರವಾಸೊಗರ ಸಂಖ್ಯೆಯೂ ಭಾರೀ ಇಳಿಕೆ ಕಂಡಿದೆ.

ಚಾಮರಾಜನಗರ, ಜುಲೈ 26: ರಾಜ್ಯದಲ್ಲಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಸುರಿಯದ ಕಾರಣ, ಚಾಮರಾಜನಗರ ಜಿಲ್ಲೆಯ ವಿಶ್ವವಿಖ್ಯಾತ ಭರಚುಕ್ಕಿ ಜಲಪಾತ ಬಣಗುಡುತ್ತಿದೆ. ಕೊಳ್ಳೇಗಾಲ ತಾಲೂಕಿನಲ್ಲಿರುವ ಈ ಜಲಪಾತವು ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಲ್ಲಿ ಹಾಲ್ನೊರೆಯಂತೆ ಉಕ್ಕಿ ಹರಿಯುತ್ತಿತ್ತು. ಆದರೆ ಈ ಬಾರಿ ಮಳೆ ಕೊರತೆಯಿಂದ ಜಲಪಾತದ ಬಂಡೆಗಳು ಮಾತ್ರ ಕಾಣುತ್ತಿದೆ. ಮಳೆಗಾಲ ಆರಂಭವಾದರೂ ಕಾವೇರಿ ಕೊಳ್ಳ ಮತ್ತು ಹಳೆ ಮೈಸೂರು ಭಾಗದಲ್ಲಿ ಸಾಕಷ್ಟು ಮಳೆಯಾಗಿಲ್ಲ. ಪರಿಣಾಮ ಕಾವೇರಿ ನದಿ ಹಾಗೂ ಕೆ.ಆರ್.ಎಸ್. ಡ್ಯಾಂ ಸಹ ಭರ್ತಿಯಾಗಿಲ್ಲ. ಇದರಿಂದ ಭರಚುಕ್ಕಿ ಜಲಪಾತಕ್ಕೆ ನೀರಿನ ಹರಿವು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಮಳೆ ಕೊರತೆ ಭರಚುಕ್ಕಿಯ ಸೌಂದರ್ಯಕ್ಕೆ ಧಕ್ಕೆ ತಂದಿದ್ದು, ಪ್ರವಾಸೋದ್ಯಮಕ್ಕೂ ಹೊಡೆತ ನೀಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More