ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ: ಏಷ್ಯಾದ ಮೊದಲ ಜಲ ವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ಕರೆಂಟ್ ಉತ್ಪಾದನೆ ಸ್ಥಗಿತ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ ಮಂಡ್ಯ ಜಿಲ್ಲೆಯ ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ಕಳೆದ ಒಂದೂವರೆ ತಿಂಗಳಿಂದ ವಿದ್ಯುತ್ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಕೆಆರ್ಎಸ್ ಅಥವಾ ಕಬಿನಿ ಡ್ಯಾಂನಿಂದ ನೀರು ಬಿಟ್ಟರೆ ಮಾತ್ರ ಮತ್ತೆ ವಿದ್ಯುತ್ ಉತ್ಪಾದನೆ ಪುನಾರಂಭ ಆಗಲಿದೆ. ಈ ಕೇಂದ್ರದಲ್ಲಿ ನಿತ್ಯ 10 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿತ್ತು.
ಮಂಡ್ಯ, ಜುಲೈ 26: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಭಾವ ಜಲ ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ ಬೀರಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಹಿನ್ನೆಲೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿರುವ ಏಷ್ಯಾದ ಮೊದಲ ಜಲ ವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಒಂದೂವರೆ ತಿಂಗಳಿಂದ ಜಲ ವಿದ್ಯುತ್ ಉತ್ಪಾದನೆ ಬಂದ್ ಆಗಿದ್ದು, ಕೆಆರ್ಎಸ್ ಅಥವಾ ಕಬಿನಿ ಡ್ಯಾಂನಿಂದ ನೀರು ಬಿಟ್ಟರೆ ಮಾತ್ರ ಮತ್ತೆ ವಿದ್ಯುತ್ ಉತ್ಪಾದನೆ ಪುನಾರಂಭ ಆಗಲಿದೆ. ಈ ಕೇಂದ್ರದಲ್ಲಿ ನಿತ್ಯ 10 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿತ್ತು. ಅದಕ್ಕಾಗಿ ನಿತ್ಯ 1,450 ಕ್ಯೂಸೆಕ್ ನೀರು ಅಗತ್ಯ ಇತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

