ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ: ಏಷ್ಯಾದ ಮೊದಲ ಜಲ ವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ಕರೆಂಟ್​ ಉತ್ಪಾದನೆ ಸ್ಥಗಿತ

Edited By:

Updated on: Jul 26, 2026 | 10:50 AM

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ ಮಂಡ್ಯ ಜಿಲ್ಲೆಯ ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ಕಳೆದ ಒಂದೂವರೆ ತಿಂಗಳಿಂದ ವಿದ್ಯುತ್ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಕೆಆರ್​​ಎಸ್ ಅಥವಾ ಕಬಿನಿ ಡ್ಯಾಂನಿಂದ ನೀರು ಬಿಟ್ಟರೆ ಮಾತ್ರ ಮತ್ತೆ ವಿದ್ಯುತ್ ಉತ್ಪಾದನೆ ಪುನಾರಂಭ ಆಗಲಿದೆ. ಈ ಕೇಂದ್ರದಲ್ಲಿ ನಿತ್ಯ 10 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿತ್ತು‌.

ಮಂಡ್ಯ, ಜುಲೈ 26: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಭಾವ ಜಲ ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ ಬೀರಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಹಿನ್ನೆಲೆ ಮಂಡ್ಯ ‌ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿರುವ ಏಷ್ಯಾದ ಮೊದಲ ಜಲ ವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಒಂದೂವರೆ ತಿಂಗಳಿಂದ ಜಲ‌ ವಿದ್ಯುತ್ ಉತ್ಪಾದನೆ ಬಂದ್ ಆಗಿದ್ದು, ಕೆಆರ್​​ಎಸ್ ಅಥವಾ ಕಬಿನಿ ಡ್ಯಾಂನಿಂದ ನೀರು ಬಿಟ್ಟರೆ ಮಾತ್ರ ಮತ್ತೆ ವಿದ್ಯುತ್ ಉತ್ಪಾದನೆ ಪುನಾರಂಭ ಆಗಲಿದೆ. ಈ ಕೇಂದ್ರದಲ್ಲಿ ನಿತ್ಯ 10 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿತ್ತು‌. ಅದಕ್ಕಾಗಿ ನಿತ್ಯ 1,450 ಕ್ಯೂಸೆಕ್ ನೀರು ಅಗತ್ಯ ಇತ್ತು‌.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More