ಮಳೆ ಅಬ್ಬರಕ್ಕೆ ಅಂಬೋಲಿ ಫಾಲ್ಸ್ಗೆ ಜೀವ ಕಳೆ: ಜಲಪಾತ ನೋಡಲು ಮುಗಿಬಿದ್ದ ಪ್ರವಾಸಿಗರು
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಜಲಪಾತಗಳಿಗೆ ಜೀವಕಳೆ ಬಂದಿವೆ. ಆದರೆ ಬೆಳಗಾವಿ ಜಿಲ್ಲೆಯ ಜಲಪಾತಗಳಿಗೆ ಅರಣ್ಯ ಇಲಾಖೆ ಪ್ರವಾಸಿಗರಿಗೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ, ನೂರು ಅಡಿ ಎತ್ತರದಿಂದ ಧುಮ್ಮಿಕ್ಕುವ ಮಹಾರಾಷ್ಟ್ರದ ಪ್ರಸಿದ್ಧ ಅಂಬೋಲಿ ಜಲಪಾತದತ್ತ ಪ್ರವಾಸಿಗರು ಕುಟುಂಬ ಸಮೇತ ಲಗ್ಗೆ ಇಡುತ್ತಿದ್ದಾರೆ.
ಬೆಳಗಾವಿ, ಜುಲೈ 10: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಹಿನ್ನೆಲೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಜಲಪಾತಗಳಿಗೆ ಜೀವಕಳೆ ಬಂದಿದೆ. ಆದರೆ ಬೆಳಗಾವಿ ಜಿಲ್ಲೆಯ 9 ಫಾಲ್ಸ್ಗಳಿಗೆ ಅರಣ್ಯ ಇಲಾಖೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವ ಹಿನ್ನೆಲೆ ಮಹಾರಾಷ್ಟ್ರದ ಫಾಲ್ಸ್ಗಳತ್ತ ಪ್ರವಾಸಿಗರು ಮುಖ ಮಾಡಿದ್ದಾರೆ. ಪಶ್ಚಿಮ ಘಟ್ಟದ ಕಾಡಂಚಿನಲ್ಲಿ ಧುಮ್ಮಿಕ್ಕುವ ಅಂಬೋಲಿ ಫಾಲ್ಸ್ಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ನೂರು ಅಡಿಗೂ ಹೆಚ್ಚು ಎತ್ತರದಿಂದ ಧುಮ್ಮಿಕ್ಕುವ ಜಲಪಾತದ ವೈಭವ ಕಣ್ತುಂಬಿಕೊಳ್ಳುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
