PM Modi Speech Live Streaming: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂಧೂರದ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯಲ್ಲಿ ಭಾರತೀಯ ಸೇನೆಯ ಶೌರ್ಯ ಮತ್ತು ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಸೇನೆಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಅಧಿವೇಶನವನ್ನು ಭಾರತದ ವಿಜಯೋತ್ಸವದ ಅಧಿವೇಶನವೆಂದು ಕರೆಯಲಾಗಿದೆ. ಪ್ರಧಾನಿಯವರ ಭಾಷಣದ ಲೈವ್ ಪ್ರಸಾರವಿದೆ.
ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದ್ದು, ಆಪರೇಷನ್ ಸಿಂಧೂರ ವಿಚಾರವಾಗಿ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿಯುವರು ಲೋಕಸಭೆಯಲ್ಲಿ ಉತ್ತರ ನೀಡುತ್ತಿದ್ದಾರೆ. ಆಪರೇಷನ್ ಸಿಂಧೂರ ಮೂಲಕ ಭಾರತದ ಸೇನೆ ಶೌರ್ಯ ಪ್ರದರ್ಶಿಸಿದೆ. ಈ ಅಧಿವೇಶನವು ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ಭಾರತೀಯ ಸೇನೆ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದ ಸೇನೆಗೆ ಧನ್ಯವಾದಗಳು. ಇಡೀ ದೇಶದ ಪರವಾಗಿ ಸೇನೆಗೆ ಅಭಿನಂದನೆಗಳು ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ಲೈವ್ ಇಲ್ಲಿದೆ.
