AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್! ಸಿಸಿಟಿವಿ ವಿಡಿಯೋ ವೈರಲ್

ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್! ಸಿಸಿಟಿವಿ ವಿಡಿಯೋ ವೈರಲ್

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Mar 17, 2026 | 10:25 AM

Share

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಒಂದೊಂದಾಗಿ ಬಯಲಾಗುತ್ತಿದ್ದು, ಇದೀಗ ಆತ ಮಹಿಳೆಯೊಬ್ಬರ ಜತೆ ಅಕ್ರಮ ಸಂಬಂಧ ಹೊಂದಲು ತಡರಾತ್ರಿ ಕಂಪೌಂಡ್ ಹಾರಿ ತೆರಳಿರುವ ವಿಡಿಯೋವೊಂದು ವೈರಲ್ ಆಗಿದೆ. ಸದ್ಯ ಪ್ರಕರಣ ಸಂಬಂಧ ಖುದ್ದು ಮಂಗಳೂರು ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದ್ದು, ಸಂತ್ರಸ್ತೆಯರು ಧೈರ್ಯವಾಗಿ ಬಂದು ದೂರು ನೀಡುವಂತೆ ತಿಳಿಸಿದ್ದಾರೆ.

ಮಂಗಳೂರು, ಮಾರ್ಚ್ 17: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಬಲವಂತ ಮಾಡಿರುವ ಆರೋಪ ಎದುರಿಸುತ್ತಿರುವ ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಇದೀಗ ಅನೇಕ ಆರೋಪಗಳು ಕೇಳಿಬರುತ್ತಿವೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದು, ಯಾರಾದರೂ ಸಂತ್ರಸ್ತೆಯರಿದ್ದರೆ ಧೈರ್ಯವಾಗಿ ಬಂದು ದೂರು ನೀಡಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅಭಯ ನೀಡಿದ್ದಾರೆ. ಆರೋಪಿ ಸಂದೇಶ್ ಹಲವಾರು ಮಹಿಳೆಯರ ಜತೆ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಆರೋಪವಿದ್ದು, ತಡರಾತ್ರಿ ಮಹಿಳೆಯೊಬ್ಬರ ಮನೆ ಕಂಪೌಂಡ್ ಹಾರಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದೆ.

ಹೆಚ್ಚಿನ ವಿವರಗಳಿಗೆ ಓದಿ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು! ಆಡಿಯೋ ವೈರಲ್

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 17, 2026 09:34 AM
Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More