ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್! ಸಿಸಿಟಿವಿ ವಿಡಿಯೋ ವೈರಲ್
ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಒಂದೊಂದಾಗಿ ಬಯಲಾಗುತ್ತಿದ್ದು, ಇದೀಗ ಆತ ಮಹಿಳೆಯೊಬ್ಬರ ಜತೆ ಅಕ್ರಮ ಸಂಬಂಧ ಹೊಂದಲು ತಡರಾತ್ರಿ ಕಂಪೌಂಡ್ ಹಾರಿ ತೆರಳಿರುವ ವಿಡಿಯೋವೊಂದು ವೈರಲ್ ಆಗಿದೆ. ಸದ್ಯ ಪ್ರಕರಣ ಸಂಬಂಧ ಖುದ್ದು ಮಂಗಳೂರು ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದ್ದು, ಸಂತ್ರಸ್ತೆಯರು ಧೈರ್ಯವಾಗಿ ಬಂದು ದೂರು ನೀಡುವಂತೆ ತಿಳಿಸಿದ್ದಾರೆ.
ಮಂಗಳೂರು, ಮಾರ್ಚ್ 17: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಬಲವಂತ ಮಾಡಿರುವ ಆರೋಪ ಎದುರಿಸುತ್ತಿರುವ ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಇದೀಗ ಅನೇಕ ಆರೋಪಗಳು ಕೇಳಿಬರುತ್ತಿವೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದು, ಯಾರಾದರೂ ಸಂತ್ರಸ್ತೆಯರಿದ್ದರೆ ಧೈರ್ಯವಾಗಿ ಬಂದು ದೂರು ನೀಡಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅಭಯ ನೀಡಿದ್ದಾರೆ. ಆರೋಪಿ ಸಂದೇಶ್ ಹಲವಾರು ಮಹಿಳೆಯರ ಜತೆ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಆರೋಪವಿದ್ದು, ತಡರಾತ್ರಿ ಮಹಿಳೆಯೊಬ್ಬರ ಮನೆ ಕಂಪೌಂಡ್ ಹಾರಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದೆ.
ಹೆಚ್ಚಿನ ವಿವರಗಳಿಗೆ ಓದಿ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಸಂತ್ರಸ್ತ ಮಹಿಳೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು! ಆಡಿಯೋ ವೈರಲ್
Published on: Mar 17, 2026 09:34 AM
Loading...
Unable to load recommendations.
Follow Us