ಮೈಸೂರು: ಸಿದ್ದರಾಮಯ್ಯ (Siddaramaiah) ಆಪ್ತ ಸಹಾಯಕ ಪೊಲೀಸ್ ಲಾಠಿ ಹಿಡಿದು ಜನರನ್ನು ಚದುರಿಸಿ ನೈತಿಕ ಪೊಲೀಸ್‌ಗಿರಿ (moral policing) ಮೆರೆದಿರುವಂತಹ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹದಿನಾರು ಮೋಳೆ ಗ್ರಾಮದಲ್ಲಿ ನಡೆದಿದೆ. ಸಿದ್ದರಾಮಯ್ಯ ಆಪ್ತ ಸಹಾಯಕ ಕುಮಾರ್ ನೈತಿಕ ಪೊಲೀಸ್‌ಗಿರಿ ಮೆರೆದಿರುವವರು. ಭಗೀರಥ ಉಪ್ಪಾರ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಗ್ರಾಮಸ್ಥರು ಅವರನ್ನು ಸುತ್ತುವರೆದಿದ್ದಾರೆ. ಜನರನ್ನು ನಿಯಂತ್ರಿಸಲು ಸಿದ್ದರಾಮಯ್ಯರ ಆಪ್ತ ಸಹಾಯಕ ಕುಮಾರ್ ಪೊಲೀಸರಿಂದ ಲಾಠಿ ಪಡೆದು ತಾವೇ ಜನರನ್ನು ಚದುರಿಸಿದ್ದಾರೆ. ಸದ್ಯ ಈ ನೈತಿಕ ಪೊಲೀಸ್‌ಗಿರಿಯ ವಿಡಿಯೋ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.