ಈ ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕನ್ನಡ ಚಿತ್ರಗಳಿಗೆ ಹೆಚ್ಚು ಆದ್ಯತೆ
2023ನೇ ಸಾಲಿನ ಬೆಂಗಳೂರು ಸಿನಿಮೋತ್ಸವದ ಉದ್ಘಾಟನಾ ಚಿತ್ರವಾಗಿ ‘ಕಾಂತಾರ’ ಸಿನಿಮಾ ಪ್ರದರ್ಶನ ಕಾಣಲಿದೆ. ಈ ವರ್ಷ ಕನ್ನಡ ಚಿತ್ರಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.
ಇಂದಿನಿಂದ (ಮಾರ್ಚ್ 23) ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru International Film Festival) ಆರಂಭ ಆಗುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಸಿನಿಮೋತ್ಸವ ಆಯೋಜನೆ ಮಾಡಿದೆ. ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (CM Basvaraj Bommai) ಅವರು ಸಿನಿಮೋತ್ಸವ ಉದ್ಘಾಟನೆ ಮಾಡಲಿದ್ದಾರೆ. 2023ನೇ ಸಾಲಿನ ಬೆಂಗಳೂರು ಸಿನಿಮೋತ್ಸವದ ಉದ್ಘಾಟನಾ ಚಿತ್ರವಾಗಿ ‘ಕಾಂತಾರ’ ಸಿನಿಮಾ ಪ್ರದರ್ಶನ ಕಾಣಲಿದೆ. ಈ ವರ್ಷ ಕನ್ನಡ ಚಿತ್ರಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಈ ವಿಚಾರವನ್ನು ಸುದ್ದಿಗೋಷ್ಠಿ ಮೂಲಕ ತಿಳಿಸಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 23, 2023 07:54 AM
Latest Videos