ಹೊಸ ಮೆಟ್ರೋ ನಿಲ್ದಾಣಗಳಲ್ಲಿ ಪ್ರಶಸ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಹೆಚ್ಚು ಸ್ಥಳ ಸ್ವಾಧೀನಪಡಿಸಿಕೊಳ್ಳಲಾಗುವುದು: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 06, 2025 | 5:23 PM

ಬೆಂಗಳೂರು ನಗರದ ಸೌಂದರ್ಯೀಕರಣಕ್ಕೆ ಬಿಬಿಎಂಪಿ ಜೊತೆ ಬಿಎಂಆರ್​ಸಿಎಲ್ ಕೈಜೋಡಿಸಲಿದೆ ಎಂದು ಹೇಳಿದ ಶಿವಕುಮಾರ್, ಹೊಸ ಮೆಟ್ರೋ ಸ್ಟೇಷನ್ ಗಳನ್ನು ನಿರ್ಮಿಸುವಾಗ ಪ್ರಯಾಣಿಕರ ವಾಹನಗಳ ಪಾರ್ಕಿಂಗ್ ಗಾಗಿ ಹೆಚ್ಚುವರಿ ಸ್ಥಳವನ್ನು ಸ್ಥಾಧೀನಪಡಿಸಿಕೊಳ್ಳುವ ಬಗ್ಗೆಯೂ ಚರ್ಚಿಸಲಾಗಿದೆ ಎಂದರು. ಹೆಚ್ಚುತ್ತಿರುವ ಟ್ರಾಫಿಕ್ ಸಂಕಷ್ಟ ದೂರಮಾಡಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರು: ಮೆಟ್ರೋ ಸೇವೆಯನ್ನು ವಿಸ್ತರಿಸಲು ಗೊರಗುಂಟೆ ಪಾಳ್ಯ, ಬಿಈಎಲ್ ರಸ್ತೆ, ಸುಮನಹಳ್ಳಿ ಜಂಕ್ಷನ್, ಲೊಟ್ಟೆಗೊಲ್ಲನಹಳ್ಳಿ, ನಾಯಂಡಹಳ್ಳಿ ಮೊದಲಾದ ಕಡೆ ಬಿಬಿಎಂಪಿ, ಬಿಡಿಎ, ಮತ್ತು ಬಿಎಂಅರ್​ಸಿಎಲ್ ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯೊಂದನ್ನು ನಡೆಸಿ ಹಲವಾರು ವಿಷಯಗಳ ಬಗ್ಗೆ ಮಾತಾಡಿದರು. ಈ ಭಾಗಗಳಲ್ಲಿ ಎಲ್ಲೆಲ್ಲಿ ಫ್ಲೈಓವರ್ ನಿರ್ಮಿಸಬೇಕು, ಟನೆಲ್ ಗಳನ್ನು ಎಲ್ಲಿ ಕೊರೆಸಬೇಕು ಸಬ್​ವೇಗೆ ಎಲ್ಲಿ ಅವಕಾಶವಿದೆ, ಯಾವೆಲ್ಲ ಜಮೀನು ಮತ್ತು ಜಾಗಗಳನ್ನು ಸ್ವಾಧೀನಪಡಿಸಿಕೊಳ್ಳಬೇಕು ಮೊದಲಾದ ಸಂಗತಿಗಳನ್ನು ಚರ್ಚಿಸಲಾಯಿತು ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ದಿಢೀರ್ ಭೇಟಿ ಕೊಟ್ಟ ಸುದೀಪ್; ಕಾರಣ ಏನು?

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.