PM Narendra Modi’s visit to Karnataka: ಕಲಬುರಗಿಯ ಮಳಖೇಡ ಕಾರ್ಯಕ್ರಮದಲ್ಲಿ ಮೂರು ಲಕ್ಷ ಜನ ಸೇರುವ ನಿರೀಕ್ಷೆ!

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jan 18, 2023 | 11:01 AM

ಕಲಬುರಗಿಯ ಸೇಡಂ ತಾಲೂಕಿನ ಮಳಖೇಡದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮೂರು ಲಕ್ಷ ಜನರನ್ನು ಸೇರಿಸುವ ಗುರಿಯನ್ನು ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ.

ಕಲಬುರಗಿ: ಕೇವಲ ಒಂದು ವಾರದ ಅವಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಎರಡನೇ ಬಾರಿ ಸ್ವಾಗತಿಸಲು ರಾಜ್ಯದಲ್ಲಿ ಸಿದ್ಧತೆಗಳು ಆರಂಭಗೊಂಡು ಮುಗಿಯುವ ಹಂತಕ್ಕೆ ಬಂದಿವೆ. ನಿಮಗೆ ಗೊತ್ತಿರುವಂತೆ ಪ್ರಧಾನಿಗಳು ಗುರುವಾರ ಉತ್ತರ ಕರ್ನಾಟಕದ ಕಲಬುರಗಿ (Kalaburagi) ಮತ್ತು ಯಾದಗಿರಿ (Yadgir) ಜಿಲ್ಲೆಯಲ್ಲಿ ನಡೆಯಲಿರುವ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಲಬುರಗಿಯ ಸೇಡಂ ತಾಲೂಕಿನ ಮಳಖೇಡದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮೂರು ಲಕ್ಷ ಜನರನ್ನು ಸೇರಿಸುವ ಗುರಿಯನ್ನು ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ. ಅದರಲ್ಲಿ ಸುಮಾರು ಒಂದು ಲಕ್ಷ ಜನರನ್ನು ಸೇಡಂ ನಿಂದ ಮಳಖೇಡದವರೆಗೆ ಬೈಕ್ ಱಲಿಯಲ್ಲಿ ಕೊಂಡೊಯ್ಯಲಾಗುವುದು ಎಂದು ಗೊತ್ತಾಗಿದೆ. ಱಲಿಗಾಗಿ 50,000 ಬೈಕ್ ಗಳನ್ನು ಅಣಿಗೊಳಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ