ಕಾವೇರಿ ಕಿಚ್ಚು: ಕೆಆರ್​ಎಸ್​ ಡ್ಯಾಂ ಮುತ್ತಿಗೆಗೆ ಯತ್ನ; ವಾಟಾಳ್ ಸೇರಿ 50ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸರ ವಶಕ್ಕೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2023 | 10:18 PM

ಕೆಆರ್​ಎಸ್ ಜಲಾಶಯದ ಬಳಿ ಹೋರಾಟಗಾರರನ್ನ ಮುಖ್ಯದ್ವಾರದ ಬಳಿಯೇ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದಿದ್ದಾರೆ. ಈ ವೇಳೆ ವಾಟಾಳ್​ ‘ಮಹಾರಾಜರ ಮನೆಯವರನ್ನು ಜಲಾಶಯದ ಒಳಗೆ ಬಿಟ್ಟಿದ್ದೀರಿ, ನಮ್ಮನ್ನು ಏಕೆ ಬಿಡುವುದಿಲ್ಲ ಎಂದು ವಾಟಾಳ್​ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ, ಅ.05: ಕಾವೇರಿ (Cauvery)ಗಾಗಿ ಕನ್ನಡಪರ ಸಂಘಟನೆಗಳ ಹೋರಾಟ ಮುಂದುವರೆದಿದ್ದು, ವಾಟಾಳ್​ ನಾಗರಾಜ್ ನೇತೃತ್ವದಲ್ಲಿ ಕೆಆರ್​ಎಸ್​ ಡ್ಯಾಂ(KRS Dam)ಗೆ ಮುತ್ತಿಗೆ ಹಾಕಿದ್ದಾರೆ. ಹೌದು, ಮಂಡ್ಯ(Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯದ ಬಳಿ ಹೋರಾಟಗಾರರನ್ನ ಮುಖ್ಯದ್ವಾರದ ಬಳಿಯೇ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದಿದ್ದಾರೆ. ಈ ವೇಳೆ ವಾಟಾಳ್​ ‘ಮಹಾರಾಜರ ಮನೆಯವರನ್ನು ಜಲಾಶಯದ ಒಳಗೆ ಬಿಟ್ಟಿದ್ದೀರಿ, ನಮ್ಮನ್ನು ಏಕೆ ಬಿಡುವುದಿಲ್ಲ ಎಂದು ವಾಟಾಳ್​ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ನಿಷೇಧಿತ ಪ್ರದೇಶ ಎಂದು ಸಬೂಬು ಹೇಳಿದ್ದು, ಸಿಎಂ ಸ್ಟಾಲಿನ್‌ ಭಾವಚಿತ್ರ ಹರಿದು, ಕಪ್ಪುಪಟ್ಟಿ ಪ್ರದರ್ಶನ ಮಾಡಿದ್ದಾರೆ. ಕೂಡಲೇ ವಾಟಾಳ್ ಸೇರಿ 50ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸರ ವಶಕ್ಕೆ ಪಡೆದು ಎಲ್ಲರನ್ನೂ ವಾಹನದಲ್ಲಿ ಕರೆದೊಯ್ದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on