ಕೋಲಾರ: ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು, ಮನೆಯಿಂದ ಹೊರ ಬಾರದಂತೆ ಸೂಚನೆ

ಕೋಲಾರ: ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು, ಮನೆಯಿಂದ ಹೊರ ಬಾರದಂತೆ ಸೂಚನೆ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Rakesh Nayak Manchi

Updated on: Dec 10, 2023 | 9:29 PM

ಕೋಲಾರ ಜಿಲ್ಲೆಯ ಗಡಿ ಗ್ರಾಮಗಳ ಜನರಿಗೆ ಕಾಡಾನೆಗಳ ಆತಂಕ ಇನ್ನಷ್ಟು ಹೆಚ್ಚಾಗಿದೆ. ಇದಕ್ಕೆ ಕಾರಣ, ತಮಿಳುನಾಡಿನ ಹೊಸೂರು ಅರಣ್ಯದಿಂದ 50ಕ್ಕೂ ಹೆಚ್ಚು ಕಾಡಾನೆಗಳು ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಅರಣ್ಯ ಪ್ರದೇಶದತ್ತ ಮುಖ ಮಾಡಿವೆ. ಹೀಗಾಗಿ ಜನರು ಮನೆಯಿಂದ ಹೊರ ಬಾರದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸೂಚನೆ ನೀಡಿದ್ದಾರೆ.

ಕೋಲಾರ, ಡಿ.10: ಜಿಲ್ಲೆಯ ಗಡಿ ಗ್ರಾಮಗಳ ಜನರಿಗೆ ಕಾಡಾನೆಗಳ (Wild elephants) ಆತಂಕ ಇನ್ನಷ್ಟು ಹೆಚ್ಚಾಗಿದೆ. ಇದಕ್ಕೆ ಕಾರಣ, ತಮಿಳುನಾಡಿನ ಹೊಸೂರು (Hosoor) ಅರಣ್ಯದಿಂದ 50ಕ್ಕೂ ಹೆಚ್ಚು ಕಾಡಾನೆಗಳು ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಅರಣ್ಯ ಪ್ರದೇಶದತ್ತ (Kamasamudra forest) ಸಾಗಿರುವುದು. ರಾತ್ರಿ ವೇಳೆಯಲ್ಲಿ ಜನರು ಮನೆಯಿಂದ ಹೊರ ಬಾರದಂತೆ ಕಾಮಸಮುದ್ರ ಪೊಲೀಸರು, ಅರಣ್ಯ ಸಿಬ್ಬಂದಿ ಮೈಕ್‌ ಮೂಲಕ ಸೂಚನೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ